ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭವನ್ನು ಮಂಗಳವಾರ 15 ರಂದು ಸಂಜೆ 5 ಗಂಟೆಗೆ ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೈಲಹೊಂಗಲದ ಮೂರುಸಾವಿರ ಮಠದ ಪ್ರಭುನೀಲಕಂಠ ಮಹಾಸ್ವಾಮಿಗಳು ವಹಿಸಲಿದ್ದು ಬೈಲಹೊಂಗಲ ಶಾಸಕರಾದ ಮಹಾಂತೇಶ ಎಸ್.ಕೌಜಲಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ.
ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ಮಾಜಿ ಶಾಸಕ, ಮಲಪ್ರಭಾ-ಘಟಪ್ರಭಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ( ಕಾಡಾ) ಅಧ್ಯಕ್ಷ ಡಾ. ವಿಶ್ವನಾಥ ಆಯ್.ಪಾಟೀಲ, ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಎಸ್. ಪರವಿನಾಯ್ಕರ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ್ ಬಗಲಿ, ತಹಶೀಲ್ದಾರ ಬಸವರಾಜ ನಾಗರಾಳ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಖ್ಯಾತ ಚಲನಚಿತ್ರ ನಟ- ನಿರ್ಮಾಪಕ ಶಿವರಂಜನ ಬೋಳಣ್ಣವರ, ದೂರದರ್ಶನ- ಆಕಾಶವಾಣಿ ಹಾಗೂ ರಂಗಭೂಮಿ ಕಲಾವಿದ ಸಿ.ಕೆ.ಮೆಕ್ಕೇದ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈಶ್ವರ ಹೋಟಿ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ಎಸ್.ತುರಮರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಕೋಶಾಧ್ಯಕ್ಷ ಎಸ್.ಡಿ.ಗಂಗಣ್ಣವರ, ತಾಲ್ಲೂಕಾ ಘಟಕದ ಮಾಜಿ ಅಧ್ಯಕ್ಷ ಬಸವರಾಜ ಕೆ. ತಲ್ಲೂರ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ ನಂದೆಣ್ಣವರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಕಾರ್ಯಕಾರಿ ಸಮಿತಿ ಎಲ್ಲ ಸದಸ್ಯರುಗಳು, ಸಾಹಿತಿಗಳು, ಕಲಾವಿದರು ಹಾಗೂ ಕನ್ನಡ ಪ್ರೇಮಿಗಳು, ಸಾಹಿತ್ಯಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ಬೈಲಹೊಂಗಲ ತಾಲ್ಲೂಕಾ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.