ಬಾಗಲಕೋಟೆ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಂ.ಆರ್.ಎನ್ ಫೌಂಡೇಶನ್, ಬಿ.ಎಂ ವೈದ್ಯಕೀಯ ಕಾಲೇಜು, ಹುಬ್ಬಳ್ಳಿಯ ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಮತ್ತು ಬೆಳಗಾವಿಯ ಕೆ. ಎಲ್. ಇ ವಿಶ್ವವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಎಂ.ಆರ್.ಎನ್ ಫೌಂಡೇಶನ್ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ ನಿರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 31 ರಂದು ಬೀಳಗಿಯ ಎಂ.ಪಿ.ಎಂ ಸ್ಕೂಲ್‌ನ ಮೈದಾನದಲ್ಲಿ ಬೆಳಗ್ಗೆ 9;30 ರಿಂದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ನಡೆಸಲಿದ್ದು ಶಿಬಿರದಲ್ಲಿ ಎಂ.ಬಿ ಪಾಟೀಲ ವೈದ್ಯಕೀಯ ಕಾಲೇಜಿನ ವೈದ್ಯರು ಭಾಗವಹಿಸಲಿದ್ದಾರೆ ಮತ್ತು ನವೆಂಬರ್ 1 ರಂದು ಜಮಖಂಡಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ನಡೆಯಲಿದ್ದು ಶಿಬಿರದಲ್ಲಿ ಹುಬ್ಬಳಿಯ ಎಂ.ಎಂ ಜೋಶಿ ಆಸ್ಪತ್ರೆಯ ವೈದ್ಯರು ಭಾಗವಹಿಸಲಿದ್ದಾರೆ ಹಾಗೂ ನವೆಂಬರ್ 2 ರಂದು ಬನಹಟ್ಟಿಯ ಎಸ್.ಟಿ.ಸಿ ಕಾಲೇಜಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದ್ದು ಶಿಬಿರದಲ್ಲಿ ಬೆಳಗಾವಿಯ ಕೆ.ಎಲ್.ಇ ವಿಶ್ವವಿದ್ಯಾಲಯದ ಜೆ.ಎನ್ ಮೆಡಿಕಲ್ ಕಾಲೇಜಿನ ಅಧ್ಯಾಪಕರು ಮತ್ತು ವೈದ್ಯರು ಭಾಗವಹಿಸಲಿದ್ದಾರೆ ಎಂದು ಎಂ.ಆರ್.ಎನ್ ಫೌಂಡೇಶನ್ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ ನಿರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಉಚಿತ ಆರೋಗ್ಯ, ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.