ಅಂಗನವಾಡಿ ಕಾರ್ಯಕರ್ತೆ ಬರ್ಬರ ಕೊಲೆ

ಉಮೇಶ ಗೌರಿ (ಯರಡಾಲ)

ತುಮಕೂರು(ನ.14):  ಅಂಗನವಾಡಿ ಕಾರ್ಯಕರ್ತೆಯನ್ನ ಆಕೆಯ ಸಂಬಂಧಿಯೇ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ.

ಭಾರತಿ(30) ಕೊಲೆಯಾದ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಲಾಗಿದೆ. ಕೊಲೆಯಾದ ಭಾರತಿ ಸಂಬಂಧಿ ದಿವಾಕರ್ (25) ಎಂಬುವನೇ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಹಿಂಭಾಗದಲ್ಲಿ ದಿವಾಕರ್ ಭಾರತಿಯನ್ನ ಕೊಲೆ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಎಲ್ಲರ ಮುಂದೆಯೇ ಆರೋಪಿ ದಿವಾಕರ್ ಭಾರತಿ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.  ಕೃತ್ಯ ನೋಡಿದ ಮಹಿಳೆಯರಿಗೆ ಬೆದರಿಕೆ ಹಾಕಿ ದಿವಾಕರ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಲೆಯಾದ ಭಾರತಿ ಹಾಗೂ ದಿವಾಕ್‌ ನಡುವೆ ಅಕ್ರಮ ಸಂಬಂಧ ಇತ್ತು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರತಿ ಕೊಲೆಗೆ ನಿಜವಾದ ಕಾರಣ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Share This Article
";