Wednesday, September 18, 2024

ಇಸ್ರೋ ಖಾಸಗೀಕರಣ –ಕೇಂದ್ರ ಕಛೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಸುದ್ದಿ ಸದ್ದು ನ್ಯೂಸ್

ಬೆಂಗಳೂರು: ನಗರದಲ್ಲಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಛೇರಿಯನ್ನು ಗುಜಾರಾತ್ ರಾಜ್ಯಕ್ಕೆ ವರ್ಗಾಹಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘ (National Students’ Union of India)(ಎನ್‍ಎಸ್‍ಯುಐ) ವಿದ್ಯಾರ್ಥಿ ಸಂಘಟನೆ ಸಹಯೋಗದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂಜಯನಗರದಲ್ಲಿ ಇರುವ ಇಸ್ರೋ ಕೇಂದ್ರ ಕಛೇರಿ ಎದುರು ಪ್ರತಿಭಟನೆ ಜರುಗಿತು.

ಪ್ರತಿಭಟನೆಯಲ್ಲಿ ಮಾತನಾಡುತ್ತಿರುವ ಡಿ ಕೆ ಶಿವಕುಮಾರ್

ಈ ವೇಳ ಡಿ.ಕೆ.ಶಿವಕುಮಾರ್ ಮಾತನಾಡಿ ನಮ್ಮ ಹಿರಿಯರು ಕಟ್ಟಿ ಬೆಳಸಿದ ಹಲವಾರು ಸಂಘ- ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿದೆ. ಉತ್ತಮ ಪರಿಸರ ಇರುವುದರಿಂದ ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆ ಸ್ಥಾಪಿಸಲಾಗಿತ್ತು. ಅದರೆ ಇಂದು ಇಸ್ರೋ ಸಂಸ್ಥೆಯನ್ನು ಗುಜರಾತಿಗೆ ವರ್ಗಾಯಿಸುವ ಹುನ್ನಾರ ನಡೆಯುತ್ತಿದೆ. ಇದು ರಾಜ್ಯಕ್ಕೆ ಮತ್ತು ರಾಜ್ಯದ ಜನತೆಗೆ ಮಾಡುವ ದ್ರೋಹ. ನಮ್ಮರಾಜ್ಯದ ಲೋಕ ಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ತೆರಳಿ ಇಸ್ರೋ ಸಂಸ್ಥೆ ಇಲ್ಲಿಯೇ ಉಳಿಯುವಂತೆ ಮಾಡಬೇಕು. ನರೇಂದ್ರ ಮೋದಿ ಅವರೊಂದಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚರ್ಚಿಸಿ ಈ ಸಂಸ್ಥೆ ಬೆಂಗಳೂರಿನಲ್ಲಿಯೇ ಉಳಿಯುವಂತೆ ಮನವಿ ಮಾಡಬೇಕು. ಒಂದು ವೇಳೆ ವರ್ಗಾವಣೆಯಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳ ಶಾಸಕ ಕೃಷ್ಣಭೈರೇಗೌಡ, ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಯಸಿಂಹ,ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಹಾಗೂ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲೆ

ರಾಜ್ಯ

error: Content is protected !!