Tuesday, September 17, 2024

15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಸಚಿವ ಬಿ.ಸಿ. ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂ ಮಾಡಿದ್ದಾರೆ.

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

* ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ.

* ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ ( 6ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿ.

* ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುತ್ತದೆ.

* ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಕೂ ಮಾಡಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!