ಬೆಳಗಾವಿಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು! ಬಿಜೆಪಿಗೆ ಮುಖಭಂಗ.

ಬೆಳಗಾವಿ : ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಮೆಟ್ಟಿಲು ಹತ್ತಿದ್ದಾರೆ.

ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದು, ಮೂರನೇ ಸ್ಥಾನಕ್ಕಿಳಿದ ಬಿಜೆಪಿ ಭಾರೀ ಮುಖಬಂಗ ಅನುಭವಿಸಿದೆ.ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಬೇಕು ಎಂಬ ಮಹಾಂತೇಶ ಕವಟಗಿಮಠ ಅವರ ಆಸೆ ನುಚ್ಚುನೂರಾಗಿದೆ.

ಕಾಂಗ್ರೆಸ್ ಸೋಲಿಸುವುದಕ್ಕಾಗಿ ನಿಂತಿದ್ದ ಲಖನ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿರುವುದು ವಿಪರ್ಯಾಸ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";