ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್

ಬೆಂಗಳೂರು: ತಮಿಳುನಾಡು ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 8 ರಂದು ಮಧ್ಯಾಹ್ನ ತಮಿಳುನಾಡಿನ ಊಟಿ ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್‌ ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದರು.

ಕೆಚ್ಚೆದೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಭಾರತೀಯ ಸೇನೆ ಹಾಗೂ ನಾಡಿನ ಜನತೆ ತೀವ್ರ ದುಃಖ ವ್ಯಕ್ತಪಡಿಸಿದೆ.

 

Share This Article
";