ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ ಎಂ ಅವರಿಗೆ ಮನವಿ ಸಲ್ಲಿಸಿದ: ಶಾಸಕ ಅನಿಲ ಬೆನಕೆ.

ಶಾಸಕ ಅನಿಲ ಬೆನಕೆ
ಉಮೇಶ ಗೌರಿ (ಯರಡಾಲ)

ಬೆಳಗಾವಿ: ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಶಾಸಕ ಅನಿಲ ಬೆನಕೆ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ  ಕೇಂದ್ರ ಸರ್ಕಾರಿ ನೌಕರರ  ಸರಿಸಮನಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೆಗೊಳಿಸುವುದು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿಯನ್ನು ಜಾರಿಗೆಗೊಳಿಸುವುದು, ಸರ್ಕಾರಿ ವಿವಿಧ ಇಲಾಖೆಯಲ್ಲಿಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಪ್ರಾಥಮಿಕ/ ಪ್ರೌಢ ಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರದ ಮುಖಾಂತರ ವಿನಂತಿಸಿದ್ದಾರೆ.

ಮನವಿ ಪತ್ರ
Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";