Saturday, September 21, 2024

ಯುಪಿ ಸಚಿವ ಮೌರ್ಯ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿ ತೊರೆದ ಮೂವರು ಶಾಸಕರು

ಸುದ್ದಿ ಸದ್ದು ನ್ಯೂಸ್

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಭಾರೀ ಆಘಾತ ನೀಡುವ ಬೆಳವಣಿಗೆಯೊಂದು ನಡೆದಿದೆ  ಓರ್ವ ಸಂಪುಟದ ಸಚಿವರು ಹಾಗೂ  ಮೂರು ಜನ ಶಾಸಕರು ರಾಜೀನಾಮೆ ನೀಡಿ ಬಿಜೆಪಿಯ ಪ್ರಮುಖ ಎದುರಾಳಿ ಸಮಾಜವಾದಿ  ಪಕ್ಷವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ಜಾತಿಯ ಪ್ರಮುಖ ನಾಯಕ ಹಾಗೂ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಟ್ವಿಟರ್‌ ಮೂಲಕ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿದ್ದೇ ತಡ ಶಾಸಕರುಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ ಮತ್ತು ಭಗವತಿ ಸಾಗರ್ ಸಹ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಇವರುಗಳ ಜೊತೆ ಇನ್ನೂ ಕೆಲವು ಸಚಿವರು ಮತ್ತು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ಯಬಹುದು ಎಂದು ಬಲ್ಲ ಮೂಲಗಳು ತಿಳಿಸಿವೆ.

                ಸ್ವಾಮಿ ಪ್ರಸಾದ್ ಮೌರ್ಯ ಅವರು ಭಾವಚಿತ್ರ

“ವಿಭಿನ್ನ ಸಿದ್ಧಾಂತದ ಹೊರತಾಗಿಯೂ ನಾನು ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದೇನೆ. ಆದರೆ ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ತೀವ್ರವಾದ ದಬ್ಬಾಳಿಕೆಯಿಂದಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ನನ್ನ ರಾಜೀನಾಮೆ ಬಿಜೆಪಿಯ ಮೇಲೆ ಎಂತಹ ಪರಿಣಾಮ ಬೀರುತ್ತದೆ ಎಂದು 2022 ರ ವಿಧಾನಸಭಾ ಚುನಾವಣೆಯ ನಂತರ ಸ್ಪಷ್ಟವಾಗುತ್ತದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.

ಜಿಲ್ಲೆ

ರಾಜ್ಯ

error: Content is protected !!