ಹಲವು ಆಕ್ಷೇಪಗಳ ನಡುವೆ ರಾಮನಗರ ತಲುಪಿದ ಮೇಕೆದಾಟು ಪಾದಯಾತ್ರೆ

ಉಮೇಶ ಗೌರಿ (ಯರಡಾಲ)

ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ. ಇಂದು ನಾಲ್ಕನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್ ವರೆಗೂ ಪಾದಯಾತ್ರೆ ನಡೆಯುತ್ತದೆ. ಮೂರು ಎಫ್ಐಆರ್ ದಾಖಲಾಗಿದ್ರು ಕ್ಯಾರೆ ಎನ್ನದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಎಫ್ಐಆರ್, ಸರ್ಕಾರದ ಎಚ್ಚರಿಗೂ ಬಗ್ಗದೇ ಕಾಂಗ್ರೆಸ್ ಪಾದಯಾತ್ರೆ ಸಾಗುತ್ತಿದೆ. ಈಗಾಗಲೇ ಸಾತನೂರು ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಮಧ್ಯೆ ಗೃಹ ಸಚಿವರು ಕೂಡ ಎಚ್ಚರಿಕೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಪಾದಯಾತ್ರೆ ಬಳಿಕ ಕಾದು ನೋಡಿ ಏನು ಮಾಡುತ್ತೇವೆ ಅಂತ ಸಚಿವ ಡಾ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳದ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ.

Share This Article
";