Friday, September 20, 2024

ಉಪವಾಸ ಸತ್ಯಾಗ್ರಹ: ಓರ್ವ ವ್ಯಾಪಾರಿ ಅಸ್ತವ್ಯಸ್ಥ. ಖಾಸಗಿ ಭಾಜಿ ಮಾರ್ಕೆಟ್ ಅವಾಂತರ

ಬೆಳಗಾವಿ: ಬೆಳಗಾವಿ ಖಾಸಗಿ ಭಾಜಿ ಮಾರ್ಕೆಟ್ ಬಂದ್ ಮಾಡುವಂತೆ ಆಗ್ರಹಿಸಿ ರೈತ ಮುಖಂಡರು, ವ್ಯಾಪಾರಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದ ಓರ್ವ ವ್ಯಾಪಾರಿ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ನಡೆದಿದೆ.

ಬೆಳಗಾವಿ ಎಪಿಎಂಸಿ ಕಚೇರಿಯ ಮುಂಭಾಗದಲ್ಲಿ ಭಾರತೀಯ ಕೃಷಿಕ ಸಮಾಜ, ಬೆಳಗಾವಿ ಜಿಲ್ಲಾ ಸಗಟು ತರಕಾರಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ರೈತಪರ, ಕಾರ್ಮಿಕ ಮಹಿಳಾ ಸಾಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಬೆಳಗಾವಿಯ ಜೈ ಕಿಸಾನ್ ಹೋಲ್ ಸೆಲ್ ವೆಜಿಟೇಬಲ್ ಮಚೆರ್ಂಟ್ ಅಸೋಸಿಯೇಷನ್ ಖಾಸಗಿ ಮಾರುಕಟ್ಟೆ ರದ್ದು ಪಡಿಸಲು ಆಗ್ರಹಿಸಿ ನಡೆಸುತ್ತಿರುವ ಅನಿರ್ಧಿಷ್ಟ ಆಮರಣ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ವರ್ತಕ ಸತೀಶ ಪಾಟೀಲ ಅಸ್ತವ್ಯಸ್ಥಗೊಂಡಿರುವ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿದ್ದಾರೆ.

ಅಧಿಕಾರಿಗಳು ದಾಖಲೆಗಳನ್ನು ತಿರುಚಿ ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಲು ನೇರವಾಗಿ ಕಾರಣವಾಗಿದ್ದಾರೆ. ಖಾಸಗಿ ಮಾರುಕಟ್ಟೆ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸ್ಥಳೀಯ ಬಿಜೆಪಿ ಶಾಸಕರು ಹಾಗೂ ಸರಕಾರಿ ಅಧಿಕಾರಿಗಳು ಖಾಸಗಿ ಮಾರುಕಟ್ಟೆಯ ರಕ್ಷಣೆಗೆ ನಿಂತಿರುವುದನ್ನು ಖಂಡಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದ ವರ್ತಕ ಸತೀಶ ಪಾಟೀಲ ಸಂಜೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿ ಪ್ರಜ್ಞೆ ತಪ್ಪಿ ಪ್ರತಿಭಟನಾ ಸ್ಥಳದಲ್ಲಿ ಬಿದ್ದರು. ಕೂಡಲೇ ಸ್ಥಳದಲ್ಲಿದ್ದ ಅಂಬುಲೆನ್ಸ್ನಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿದೆ.

ಉಪವಾಸ ಸತ್ಯಾಗ್ರಹ ನಡೆಸಿದರೂ ಇಲ್ಲಿಯವರೆಗೂ ಜಿಲ್ಲಾಡಳಿತ ಖಾಸಗಿ ಮಾರುಕಟ್ಟೆಯ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಮುಂದೆ ಏನಾದರೂ ಹೆಚ್ಚು ಕಡಿಮೆಯಾದರೆ ಅದಕ್ಕೆ ಸರಕಾರವೇ ನೇರ ಕಾರಣ ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!