ಫೆಬ್ರವರಿ 12ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು(ಫೆ.10): ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.

ಪ್ರಮುಖ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ನಕಲಿ ಪ್ರತಿ, 2 ಫೋಟೋ, ಆಧಾರ್ ಕಾರ್ಡ್ ಹಾಗೂ ಐದು ಸೆಟ್ ಸ್ವವಿವರದ ಅರ್ಜಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಳು, ವಯೋಮಿತಿ, ವೇತನ ಮತ್ತು ಉದ್ಯೋಗದ ಸಂಪೂರ್ಣ ವಿವರಗಳನ್ನು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ : 8277895931

ಉದ್ಯೋಗ ಮೇಳ ನಡೆಯುವ ಸ್ಥಳ : ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಐವನ್ನ-ಎ-ಶಾಹಿ, ಶಂಭೋಜಿನಲ್ಲಿ, ಕಲಬುರ್ಗಿ-585102

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು https://skillconnect.kaushalkar.com/app/gulbarga-jobfair?utm_source=DH-MoreFromPub&utm_medium=DH-app&utm_campaign=DH ಲಿಂಕ್ ಬಳಸಿ ತಮ್ಮ ಹೆಸರನ್ನು ಈ ಕೂಡಲೇ ನೊಂದಾಯಿಸಿಕೊಳ್ಳಿ. ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು [email protected] ವಿಳಾಸಕ್ಕೆ ಮೇಲ್ ಕೂಡ ಮಾಡಬಹುದು.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";