ಸುದ್ದಿ ಸದ್ದು ನ್ಯೂಸ್
ಚನ್ನಮ್ಮನ ಕಿತ್ತೂರು: ಜನವರಿ 14 ರಂದು ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಡಾ.ಕಣವಿ ಅವರು ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.
ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ನಂತರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲಾಡಳಿತದಿಂದ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಇತ್ತೀಚೆಗೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.
ಜನನ: 1928 ಜೂನ್ 28 ರಂದು ಗದಗ ಜಿಲ್ಲೆಯ ಹೊಂಬಳದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ ಅವರು ಉದರದಲ್ಲಿ ಜನಿಸಿದ ಇವರು ಕವಿ, ಅಧ್ಯಾಪಕರು, ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು.ಪ್ರಸಾರಂಗದ ನಿರ್ದೇಶಕರಾಗಿ, ಕಾರ್ಯನಿರ್ವಹಿಸಿದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು. 1956 ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ 1983 ರವರೆಗೆ ಸೇವೆ ಸಲ್ಲಿಸಿದ್ದರು.
ಪ್ರಶಸ್ತಿ_ಪುರಸ್ಕಾರಗಳು: ಇವರ “ಜೀವಧ್ವನಿ” ಎಂಬ ಕೃತಿಗೆ 1981 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ,, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, ನಾಡೋಜ ಮತ್ತು ಪಂಪ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಿಧನರಾಗಿರುವುದು ನಾಡಿನ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು. ಸಂಜೆ ಧಾರವಾಡ ಕೆಲಗೇರಿ ಸಮೀಪದಲ್ಲಿ ಇರುವ ಅವರ ಫಾರ್ಮ್ ಹೌಸನಲ್ಲಿ ಅಂತ್ಯಕ್ರಿಯೆ ಜರುಗಿಸಲಾಗುವುದು. ನಿತೇಶ ಪಾಟೀಲ ಜಿಲ್ಲಾಧಿಕಾರಿ