ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಹುದದೆ ಭರ್ತಿ ಪ್ರಕ್ರಿಯೆಗೆ ಈ ವಾರದಲ್ಲೇ ಚಾಲನೆ ಸಿಗಲಿದೆ.ಶಿಕ್ಷಣ ಇಲಾಖೆ ಈಗಾಗಲೇ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಅನುಮತಿ ಪಡೆದುಕೊಂಡಿದ್ದು, ಸಿಇಟಿ ದಿನಾಂಕವನ್ನು ಶೀಘ್ರವೇ ಘೋಷಣೆ ಮಾಡಲಿದೆ.
2018ರ ಬಳಿಕ ಆರ್ಥಿಕ ಮಿತವ್ಯಯ, ಶೈಕ್ಷಣಿಕ ಅನಿಶ್ಚಿತತೆ, ಕೊರೊನಾ ಸೇರಿದಂತೆ ಹಲವು ಕಾರಣಗಳಿಂದ ಶಿಕ್ಷಕರ ನೇಮಕ ಪ್ರಕ್ರಿಯೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವಾರದಲ್ಲೇ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವುದಾಗಿ ಶಿಕ್ಷಣ ಇಲಾಖೆ ಅಗತ್ಯ ಪ್ರಕ್ರಿಯೆ ಆರಂಭಿಸಿದೆ.
ಶಿಕ್ಷಕರ ಹುದ್ದೆಗೆ ಬಿ,ಇಡಿ ಮುಗಿಸಿರಬೇಕು. ಮುಖ್ಯವಾಗಿ ಶಿಕ್ಷಣ ಇಲಾಖೆ ನಡೆಸಿದ ಅರ್ಹತಾ ಪರೀಕ್ಷೆಯಲ್ಲಿ ಅರ್ಹ ಅಂಕ ಪಡೆದುಕೊಂಡಿರಬೇಕು. ಸಿಇಟಿಯಲ್ಲಿ ಗರಿಷ್ಠ ಅಂಕ ಪಡೆದವರು. ಮೆರಿಟ್ ಆಧಾರದಲ್ಲಿ ಮೀಸಲಾತಿ ಪರಿಗಣಿಸಿ ನೇರವಾಗಿ ನೇಮಕ ಮಾಡಿಕೊಳ್ಳಲಾಗುವುದು. ಇನ್ನು ಇದೇ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳನ್ನು ಕೇಂದ್ರೀಕರಿಸಿ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.