ಬೈಲಹೊಂಗಲ:ತಾಲೂಕಿನ ಸಿದ್ಧಸಮುದ್ರ ಗ್ರಾಮದಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ಅಂದಾಜು 17 ಲಕ್ಷ ರೂಪಾಯಿ ಗಳಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಸಕ ಮಹಾಂತೇಶ ಕೌಜಲಗಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ದೇಶದ ಆಸ್ತಿಗಳಾದ ಮುದ್ದು ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮತ್ತು ಪೋಷಕರು ಮಾಡಬೇಕು.
ಶಾಸಕರು ಸರಕಾರದಿಂದ ಬರುವಂತಹ ಎಲ್ಲ ರೀತಿಯ ಪೌಷ್ಟಿಕ ಆಹಾರಗಳನ್ನು ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಸರಿಯಾದ ರೀತಿಯಲ್ಲಿ ತಲುಪಿಸಿ ಮಕ್ಕಳಲ್ಲಿ ಮತ್ತು ಬಾಣಂತಿಯರಲ್ಲಿ ಹಾಗೂ ಗರ್ಭಿಣಿಯರಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ಕೆಲಸ ಮಾಡಬೇಕೆಂದರು.
ಈ ವೇಳೆ ಬೈಲಹೊಂಗಲ ಸಿಡಿಪಿಓ ರೇವತಿ ಹೊಸಮಠ ಮಾತನಾಡಿ ಸಿದ್ಧಸಮುದ್ರ ಗ್ರಾಮದಲ್ಲಿ ಮಕ್ಕಳು ಮತ್ತು ಬಾನಂತಿಯರು ಹಾಗೂ ಗರ್ಭಿಣಿಯರ ಸಂಖ್ಯೆ ಹೆಚ್ಚು ಇದ್ದು ಈಗಾಗಲೇ ಸರ್ಕಾರದಿಂದ ಬರತಕ್ಕಂತಹ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ, ಮಾತೃ ವಂದನಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳುತ್ತಿದು, ಇನ್ನೂ ಮುಂದೆ ಬರತಕ್ಕಂತಹ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದರು.
ನಂತರ ಭಾಗ್ಯಲಕ್ಷ್ಮಿ ಬ್ಯಾಂಕ್ ಪುಸ್ತಕ ವಿತರಣೆಯೊಂದಿಗೆ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.
ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ನೀಡಿದ ಸಂಗಪ್ಪ ತಟ್ಟಿಮನಿ ರವರನ್ನು ಸನ್ಮಾನಿಸಿ ಸತ್ಕರಿಸದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್ ಜಿ ಬೆಳಗಾವಿ ಕ್ರಮವನ್ನು ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಈರಣ್ಣಾ ಕರೀಕಟ್ಟಿ , ಕಕ್ಕಯ್ಯನವರ. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿದ್ದಪ್ಪ ನಂದಿಹಳ್ಳಿ, ಗ್ರಾಮ ಪಂಚಾಯತ್ ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.