ಧಾರವಾಡ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ಗುರುವಾರ ಧಾರವಾಡ ತಾಲೂಕಿನ ಮರೇವಾಡ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ, ಮಗಳೊಂದಿಗೆ ಸೇರಿಕೊಂಡು ಪತಿ ಈರಣ್ಣನನ್ನು ಗುರುವಾರ ಸಾಯಂಕಾಲ ಸುಮಾರು 7 ಗಂಟೆಗೆ ಹತ್ಯೆ ಮಾಡಿದ್ದಾರೆ. ಈರಣ್ಣ ಕುಡಿದು ಬಂದು ಪತ್ನಿ ಮತ್ತು ಮಗಳೊಂದಿಗೆ ಜಗಳಕ್ಕೆ ಮುಂದಾಗಿದ್ದರು. ಈ ವೇಳೆ ಮಗಳೊಂದಿಗೆ ಸೇರಿಕೊಂಡು ಶೋಭಾ ಪತಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣನನ್ನು ಹುಬ್ಬಳ್ಳಿಯ ಕಿಮ್ಸ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.