ಹಿಂಡಲಗಾ ಜೈಲಲ್ಲೇ ಪೋಕ್ಸೊ ಆರೋಪಿ ಬಚ್ಚನಕೇರಿಯ ಯುವಕ ಮಂಜುನಾಥ ನೇಣಿಗೆ ಶರಣು!

ಉಮೇಶ ಗೌರಿ (ಯರಡಾಲ)

ಬೆಳಗಾವಿ (ಅ.2): ಬೆಳಗಾವಿಯ ಹಿಡಲಗಾ ಜೈಲಿನಲ್ಲಿ ವಿಚಾರಣಾಧೀನ ಪೋಕ್ಸೊ ಆರೋಪಿ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಕಿತ್ತೂರು ತಾಲೂಕಿನ ಬಚ್ಚನಕೇರಿಯ ಮಂಜುನಾಥ್ ನಾಯ್ಕರ(20) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮಂಜುನಾಥ್‌ ಮೂರು ತಿಂಗಳ ಹಿಂದಷ್ಟೇ ಪೋಕ್ಸೋ ಕೇಸ್ ಅಡಿಯಲ್ಲಿ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದ. ಆದರೆ ನಿನ್ನೆ ಮಂಜುನಾಥ್‌ ಜೈಲಿನ ಪಾಳುಬಿದ್ದ ಕೊಠಡಿಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು ತಕ್ಷಣವೇ ಗಮನಿಸಿದ ಸಹ ಕೈದಿಗಳಿಂದ ಜೈಲು ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಜುನಾಥ್‌ನನ್ನು ಅಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮಂಜುನಾಥ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಆರೋಪಿ ಮಹಾಂತೇಶ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಕುರಿತು ಕಳೆದ 3 ತಿಂಗಳ ಹಿಂದೆ ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಇದೀಗ ಆರೋಪಿಯು ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share This Article
";