ಬೆಳಗಾವಿ:ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಹಾಗೂ ತುಮಕೂರು ಜಿಲ್ಲಾ ಶಾಖೆ ಇವರು 2022 ಡಿಸೆಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ತುಮಕೂರಿನಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಿದೆ.
ಈ ಕಾರ್ಯಕ್ರಮದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಕುರಿತಾಗಿ ಡಾ.ಹೆಚ್.ನರಸಿಂಹಯ್ಯ ಪ್ರಶಸ್ತಿ ನೀಡಲಾಗುತ್ತಿದೆ. ರಾಜ್ಯ ಮಟ್ಟದ ಹೆಚ್.ನರಸಿಂಹಯ್ಯ ಪ್ರಶಸ್ತಿಗೆ ಕೊನೆಯ ದಿನಾಂಕ ಅಕ್ಟೋಬರ್ 30. ಪ್ರತಿ ಜಿಲ್ಲೆಗೆ ಒಬ್ಬರಂತೆ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ. ಅದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಕುರಿತು ಜಾಗೃತಿ ಮೂಡಿಸಿದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಅರ್ಹ ಶಿಕ್ಷಕರು, ಸಾಹಿತಿಗಳು, ಕಲಾವಿದರು ತಮ್ಮ ಪ್ರತಿಭೆಗೆ ಕುರಿತು ದಾಖಲೆ ಗಳನ್ನೊಳಗೊಂಡ ಅರ್ಜಿಯನ್ನು ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಂಗಮೇಶ ದುಂಡಪ್ಪ ಖನ್ನಿನಾಯ್ಕರ ಇವರಿಗೆ ಸಲ್ಲಿಸಿ.ಮೊ: 9731973793 ಗೆ ಸಂಪರ್ಕಿಸಲು ಸೂಚಿಸಿದೆ.
ಇದೇ ಸಂದರ್ಭದಲ್ಲಿ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ, ಒಂದು ಸೂರು ಪುಸ್ತಕ ನೂರು ನೂರು ಪುಸ್ತಕಗಳ ಬಿಡುಗಡೆಗೆ ಆಸಕ್ತರು ಲೇಖನಗಳನ್ನು ಕಳಿಸಿ, ಹುಲಿಕಲ್@60 ಅಭಿನಂದನ ಗ್ರಂಥ ಬಿಡುಗಡೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಿದೆ. ತೀರ್ಮಾನ ಕೈಗೊಳ್ಳಲಾಯಿತು.