ಕಲಬುರಗಿ: ಅನುಮತಿ ಪಡೆಯದೆ ಬೆಂಬಲಿಗರು ಹಾಕಿದ್ದ ಬ್ಯಾನರ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ನಗರದ ಆಳಂದ ಚೆಕ್ಪೋಸ್ಟ್ ಬಳಿ ಪ್ರಿಯಾಂಕ್ ಖರ್ಗೆ ಭಾವಚಿತ್ರವಿರುವ ಬ್ಯಾನರ್ ಅನ್ನು ಬೆಂಬಲಿಗರು ಹಾಕಿದ್ದರು. ಬ್ಯಾನರ್ ಹಾಕಿದವರ ಹೆಸರಿಲ್ಲದಿದ್ದರಿಂದ ಸಚಿವರಿಗೆ ಪಾಲಿಕೆ ದಂಡವಿಧಿಸಿದೆ.
ಸದ್ಯ 5 ಸಾವಿರ ರೂ. ದಂಡ ಪಾವತಿಸಲು ಪ್ರಿಯಾಂಕ್ ಖರ್ಗೆ ಒಪ್ಪಿಕೊಂಡಿದ್ದು, ತಮ್ಮ ಸಿಬ್ಬಂದಿಗೆ ದಂಡದ ಹಣ ಪಾವತಿಸಲು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅನುಮತಿ ಪಡೆಯದೆ ಬ್ಯಾನರ್ ಹಾಕುವವರ ವಿರುದ್ಧ ಕ್ರಮಗೊಳ್ಳುವಂತೆ ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದರು.