ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ.
ಮುಂದಿನ ವಾರ ಮುಖ್ಯಮಂತ್ರಿ ಅವರ ಸಮಯ ಅವಕಾಶ ಲಭ್ಯತೆ ಆಧಾರದಲ್ಲಿ ಶಾಸಕರು, ಸಂಸದರಿಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಈ ಭೇಟಿ ಕಡ್ಡಾಯವಾಗಿರುವುದಿಲ್ಲ ಎಂದು ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.
ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೃಪೆ:ಟಿವಿ9.