ಜನತಾ ದರ್ಶನದಲ್ಲಿ ಗಲಾಟೆ: MLA ಹಾಗೂ MP ವಿರುದ್ಧ FIR.

ಉಮೇಶ ಗೌರಿ (ಯರಡಾಲ)

ಕೋಲಾರ: ಇತ್ತೀಚೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ಮಧ್ಯೆ ನಡೆದ ಜಟಾಪಟಿ ಸಂಬಂಧ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಕೋಲಾರ  ಸಂಸದ ಮುನಿಸ್ವಾಮಿ ವಿರುದ್ಧ ಬಂಗಾರಪೇಟೆ ಶಾಸಕರ ದೂರಿನ ಅನ್ವಯ ದೂರು ದಾಖಲಾಗಿದೆ. ಮತ್ತೊಂದೆಡೆ ಬಿಜೆಪಿ ಯುವ‌ಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ನೀಡಿದ ದೂರಿನ ಅನ್ವಯ ಶಾಸಕ ನಾರಾಯಣಸ್ವಾಮಿ ವಿರುದ್ಧ ಕೇಸ್‌ ದಾಖಲಾಗಿದೆ.

ಸೆಪ್ಟೆಂಬರ್‌ 25ರಂದು ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಸಚಿವ ಭೈರತಿ ಸುರೇಶ್ ಪಕ್ಕದಲ್ಲಿ ಕುಳಿತಿದ್ದರು. ಈ ವೇಳೆ ಬಂಗಾರಪೇಟೆ ಶಾಸಕ ಎಸ್‌.ಎನ್ ನಾರಾಯಣಸ್ವಾಮಿ ಅವರನ್ನ ನೋಡಿಕೊಂಡು ಎಲ್ಲಾ ಭೂಗಳ್ಳರನ್ನು ಅಕ್ಕಪಕ್ಕ ಕೂರಿಸಿಕೊಂಡು ಜನತಾ ದರ್ಶನ ಮಾಡ್ತಾ ಇದ್ದಾರೆ ಎಂದರು. ಈ ವೇಳೆ ಕ್ಷಣಾರ್ಧದಲ್ಲಿ ಆಕ್ರೋಶಗೊಂಡ ನಾರಾಯಣಸ್ವಾಮಿ ಸಂಸದರಿಗೆ ಏಕವಚನದಲ್ಲೇ ಬೈಯಲು ಶುರು ಮಾಡಿಕೊಂಡರು.

ಕೊನೆಗೆ ಇಬ್ಬರ ನಡುವಿನ ಜಟಾಪಟಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಸಂಸದ ಮುನಿಸ್ವಾಮಿಯನ್ನು ತಬ್ಬಿಕೊಂಡ ಕೋಲಾರ ಎಸ್ಪಿ ನಾರಾಯಣ ಸಂಸದರನ್ನ ಹಿಡಿದುಕೊಂಡು ವೇದಿಕೆಯಿಂದ ಹೊರಗೆ ಕರೆದುಕೊಂಡು ಹೋದರು. ಈ ಸಂದರ್ಭ ಸಾಕಷ್ಟು ತಳ್ಳಾಟ ನೂಕಾಟದ ಜೊತೆಗೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ನಂತರ ಸಂಸದ ಮುನಿಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ FIR ದಾಖಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ FIR ದಾಖಲಾಗಿತ್ತು. ಇದೀಗ ಮತ್ತೆ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ 2ನೇ FIR ದಾಖಲಾಗಿದೆ. ಈ ನಡುವೆ ಸಂಸದ ಮುನಿಸ್ವಾಮಿ ಸೆಪ್ಟೆಂಬರ್‌ 27 ರಂದು ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೃಪೆ:ಪಬ್ಲಿಕ್‌
Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";