ಚನ್ನಮ್ಮನ ಕಿತ್ತೂರು: ಕಿತ್ತೂರು ಅರಮನೆ ಹಾಗೂ ಕೋಟೆ ಅಭಿವೃದ್ಧಿಯನ್ನು ಅಕ್ಟೋಬರ್ 2024ರ ಕಾಲಮಿತಿಯೊಳಗೆ ಮುಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ನಡೆಸಿದ ಸಬೆಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಬ್ರಿಟೀಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಸೇನೆ ಮೊದಲ ಗೆಲುವು ಸಾಧಿಸಿದ್ದ ಐತಿಹಾಸಿಕ ವಿಜಯಕ್ಕೆ 2024 ಅಕ್ಟೋಬರ್ ಗೆ 200 ವರ್ಷವಾಗಲಿದೆ. ಇದು ಇಡೀ ನಾಡಿನ ಹೆಮ್ಮೆಯ ವಿಚಾರಗಳಲ್ಲೊಂದು. ಈ ನಿಟ್ಟಿನಲ್ಲಿ ಸರ್ಕಾರ ಐತಿಹಾಸಿಕ ಕಾರ್ಯಕ್ರಮ ಯೋಜಿಸುವ ಆಲೋಚನೆಯಲ್ಲಿದ್ದು, ಅಷ್ಟರೊಳಗೆ ಕಿತ್ತೂರು ಕೋಟೆ ಹಾಗೂ ಅರಮನೆ ಹಾಗೂ ರಾಣಿ ಚನ್ನಮ್ಮ ಅವರ ಸಮಾಧಿ ಸ್ಥಳ ಸಂಪೂರ್ಣ ಅಭಿವೃದ್ಧಿಯಾಗಬೇಕು. ಅಲ್ಲದೆ, ಈ ಸ್ಥಳಗಳು ಪ್ರವಾಸಿ ತಾಣವಾಗಿಯೂ ಜನರನ್ನು ಸೆಳೆಯುವಂತಿರಬೇಕು ಎಂದು ಅಧಿಕಾರಿಗಳಿಗೆ ಸಚಿವಕೃಷ್ಣ ಬೈರೇಗೌಡ ಅವರು ಸೂಚಿಸಿದರು.
ಈ ವೇಳೆ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಗೌರೀಶ ಹೆಗಡೆ ಸೇರಿದಂತೆ ಇತರರಿದ್ದರು.