Saturday, July 27, 2024

ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳ ನಿರ್ದೇಶನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ವಾಯುವ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು  ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿರುವದರಿಂದ ಈ ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೂ ಸಹ ಪುನಃ ಅರ್ಜಿ ಸಲ್ಲಿಸಬೇಕಾಗುತ್ತದೆ.

 ಪದವಿಧರ ಮತಕ್ಷೇತ್ರಕ್ಕೆ ಮತದಾರರಾಗಲು ಅರ್ಹತೆ   ಕೆಳಗಿನಂತೆ ಇವೆ

ಮತಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿರಬೇಕು, 2021 ನವೆಂಬರ್ 01 ನೇ ತಾರೀಖಿಗಿಂತ ಮುಂಚೆ (ಅರ್ಹತಾ ದಿನಾಂಕ :01 ನವೆಂಬರ್ 2021) ಕನಿಷ್ಠ ಮೂರು ವರ್ಷಗಳಷ್ಟು ಮೊದಲು ಭಾರತದಲ್ಲಿ ಇರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ  ವ್ಯಕ್ತಿಯು ಪದವೀಧರರ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲ  ಅರ್ಹರಿರುತ್ತಾರೆ.

ಶಿಕ್ಷಕರ ಮತಕ್ಷೇತ್ರಕ್ಕೆ ಮತದಾರರಾಗಲು ಅರ್ಹತೆ   ಕೆಳಗಿನಂತೆ ಇವೆ

ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯವಾಗಿ ನಿವಾಸಿಯಾಗಿರಬೇಕು, 2021 ನವೆಂಬರ್ 01 ನೇ ತಾರೀಖಿಗಿಂತ ಮುಂಚೆ  (ಅರ್ಹತಾ ದಿನಾಂಕ :01 ನವೆಂಬರ್ 2021)  ಆರು ವರ್ಷಗಳ ಅವಧಿಯಲ್ಲಿ ಕನಿಷ್ಠ ಒಟ್ಟು ಮೂರು ವರ್ಷಗಳಷ್ಟು ಪ್ರೌಡಶಾಲೆಗಿಂತ ಕಡಿಮೆಯಿಲ್ಲದ ದರ್ಚೆಯಲ್ಲಿ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಭೋದನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಹರಿರುತ್ತಾರೆ, ಆದ್ದರಿಂದ ಕಿತ್ತೂರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅರ್ಹ ಮತದಾರರು ವಾಯುವ್ಯ ಪದವೀಧರ ಕ್ಷೇತ್ರಕ್ಕೆ ನಮೂನೆ-18 ರಲ್ಲಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ನಮೂನೆ-19 ರಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ದಿನಾಂಕ 06 ನವೆಂಬರ್2021 ರೊಳಗಾಗಿ ತಹಶೀಲ್ದಾರ ಕಾರ್ಯಾಲಯ, ಕಿತ್ತೂರ ನಲ್ಲಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್‌ ಜಿ ಹಿರೇಮಠ  ಅವರು  ನಿರ್ದೇಶನದ ಮೇರೆಗೆ ಕಿತ್ತೂರು ದಂಡಾಧಿಕಾರಿ ಸೋಮಲಿಂಗಪ್ಪ ಹಾಲಗಿ ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳು, ಕರ್ನಾಟಕ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

ಜಿಲ್ಲೆ

ರಾಜ್ಯ

error: Content is protected !!