Tuesday, May 28, 2024

ತಿಗಡಿ ಗ್ರಾಮದ ಯುವಕನ ಹತ್ಯೆ

ಬೆಳಗಾವಿ(ಅ.31): ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ವ್ಯಕ್ತಿಯೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕ. ಬಸವರಾಜ ನಾಯ್ಕರ.

ತಿಗಡಿ ಗ್ರಾಮದ ಬಸವರಾಜ್ ನಾಯ್ಕರ್ ಕೊಲೆಯಾದ ದುರ್ದೈವಿ. ಹಿರೇಬಾಗೇವಾಡಿಯಲ್ಲಿ ಟೈಲ್ಸ ಅಂಗಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ನಿನ್ನೆ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ತಿಗಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್‍ಪಿ ಅಮರನಾಥ್ ರೆಡ್ಡಿ, ಬೈಲಹೊಂಗಲ ಡಿಎಸ್‍ಪಿ ಕಟಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!