Tuesday, September 17, 2024

ಗೋವಾ ದಲ್ಲಿ ಕನ್ನಡ ಭವನ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು(ಅ.09):ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ .ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಹಾಗೂ ಅಖಿಲ ಗೋವಾ ಕನ್ನಡ ಮಹಾಸಂಘದ ನೇತೃತ್ವದಲ್ಲಿ ಕಳೆದ 12 ವರ್ಷಗಳಿಂದಲೂ ಸಿದ್ದಣ್ಣ ಮೇಟಿ. ಹನುಮಂತ್ ರೆಡ್ಡಿ ಶಿರೂರ್ ಹಾಗೂ ಮಹೇಶ್ ಬಾಬು ಸುರ್ವೆ ಅವರ ನೇತೃತ್ವದಲ್ಲಿ ಗೋವಾದಲ್ಲಿ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ನಡೆಸಲಾಗುತ್ತಿದೆ.

ಗೋವಾದ ಸಹಸ್ರಾರು ಕನ್ನಡಿಗರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಮ್ಮನ ತೇರನ್ನು ಪ್ರತಿವರ್ಷ ಎಳೆಯುತ್ತಿದ್ದಾರೆ.
ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದರ ಜತೆ ಕನ್ನಡ ಭವನ ನಿರ್ಮಾಣಕ್ಕೆ ೧೦ ಕೋಟಿ ರೂಪಾಯಿ ಮಂಜೂರು ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.

ಮುಖ್ಯಮಂತ್ರಿ ಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹನುಮಂತ್ ರೆಡ್ಡಿ ಶಿರೂರ ಹಾಗೂ ಕರ್ನಾಟಕ ಜಾಗೃತಿ ವೇದಿಕೆಯ ಮಹೇಶ್ ಬಾಬು ಸುರ್ವೆ ಗೋವಾ ಸಂಘದ ಪದಾಧಿಕಾರಿಗಳು
ಸಂತಸ ವ್ಯಕ್ತಪಡಿಸಿದರು.

ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್
ಭಗವಾನ್ ಹಲಮನಕರ .ಮಾಪುಸಾದ ರಾಘವ ಶೆಟ್ಟಿ.
ಗೋವಾ ಬಂಟ್ಸ್ ಸಂಘದ ಶೆಟ್ರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿಲ್ಲೆ

ರಾಜ್ಯ

error: Content is protected !!