Friday, September 20, 2024

ರಸ್ತೆ ಕಾಮಗಾರಿ ವಿರೋಧಿಸಿ ರೈತರ ಧರಣಿ: ರೈತ ಓರ್ವ ಬೆಂಕಿ ಹಚ್ಚಿಕೊಂಡು ಅತ್ಮ ಹತ್ಯೆಗೆ ಯತ್ನ.

ಬೆಳಗಾವಿ:  ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಮಚ್ಚೆ ಗ್ರಾಮದಲ್ಲಿ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದು, ಪೊಲೀಸರು ಧರಣಿ ನಿರತ ರೈತರನ್ನು ಎಳೆದಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ರೈತ ಮಹಿಳೆಯನ್ನು ಎಳೆದಾಡಿ, ಅವರ ಸೀರೆ ಹರಿದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಇನ್ನೊಂದೆಡೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಜಮೀನು ಮಾಲೀಕ ಆಕಾಶ್ ಎಂಬುವವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸರ್ವೆಯಾದ ಜಮೀನು ಬಿಟ್ಟು ಬೇರೆ ಜಮೀನಲ್ಲಿ ಅಧಿಕಾರಿಗಳು ಕಾಮಗಾರಿ ನಡೆಸುತ್ತಿದ್ದಾರೆ. ಈ ಮೂಲಕ ರೈತರ ಭೂಮಿ ಕಬಳಿಸುವ ಹುನ್ನಾರ ನಡೆದಿದೆ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!