Sunday, September 8, 2024

ಮಹಾವೀರ ನಿಲಜಗಿಗೆ ರಾಜ್ಯೋತ್ಸವ ಪ್ರಶಸ್ತಿ

ಸುದ್ದಿ ಸದ್ದು ನ್ಯೂಸ್ (1 ಡಿಸೆಂಬರ್ 2021)

ಹುಕ್ಕೇರಿ; ಪಟ್ಟಣದ ಪ್ರತಿಷ್ಟಿತ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಹಾವೀರ ನಿಲಜಗಿ ಅವರಿಗೆ ದ ನ್ಯೂಸ್ ಪೇಪರ್ಸ ಅಶೋಸಿಯೇಷನ್ ಆಫ್ ಕರ್ನಾಟಕ-2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಮಹಾವೀರ ನಿಲಜಗಿ ಅವರಿಗೆ ಈ ಪ್ರಶಸ್ತಿಯನ್ನು ಡಿ.26 ರಂದು ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ನೀಡಿ ಗೌರವಿಸಲಿದ್ದಾರೆ.

ಮಹಾವೀರ ನಿಲಜಗಿ ಅವರು ಪ್ರಶಸ್ತಿಗೆ ಆಯ್ಕಯಾಗಿರುವುದಕ್ಕೆ ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಪುರಸಭೆ ಆಡಳಿತ ಮಂಡಳಿ ಹಾಗೂ ಪಟ್ಟಣದ ನಾಗರೀಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!