Friday, April 19, 2024

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 16,000 ಹುದ್ದೆ ಭರ್ತಿ, ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ: ಸಿಎಂ ಘೋಷಣೆ

ಸುದ್ದಿ ಸದ್ದು ನ್ಯೂಸ್

ಬೀದರ್: ಅತಿ ಶೀಘ್ರದಲ್ಲಿ ಕಲ್ಯಾಣ ಕರ್ನಾಟಕದ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಹೇಳಿದ್ದಾರೆ. ಈಗಾಗಲೇ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. ನಾನು ಮುಖ್ಯ ಮಂತ್ರಿ ಆದ ಕೇವಲ 1 ಗಂಟೆಯಲ್ಲಿ ರೈತರ ಮಕ್ಕಳಿಗೆ ಯೋಜನೆ ಜಾರಿ ಮಾಡಿರುವೆ. ಹಿಂದಿನ‌ ಕಾಂಗ್ರೆಸ್ ಸರ್ಕಾರಕ್ಕೆ ಏಕೆ ಇದು‌ ಸಾಧ್ಯವಾಗಿರಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಬರುವ ಮಾರ್ಚ್ 31ರ ಒಳಗಾಗಿ ಎಲ್ಲರಿಗೂ ಸೂರು ಕಲ್ಪಿಸುತ್ತೇವೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ.
ಮುಂಬರುವ ದಿನದಲ್ಲಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಅಭಿವೃದ್ಧಿಗೆ ಕೆಲವು ವಿಶೇಷ ಯೋಜನೆಗಳನ್ನು ರೂಪಿಸಿಲಾಗುವುದು ಎಂದೂ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅಧಿವೇಶನ ಮುಗಿದ ಬಳಿಕ ಬೀದರ್ ಜಿಲ್ಲೆಗೆ ಹತ್ತಾರು ಯೋಜನೆಗಳ ಭೂಮಿ ಪೂಜೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಜನಪ್ರಿಯರಿದ್ದಾರೆ ಆದರೆ ಅವರು ಜನರಿಗಿಲ್ಲ ಎಂದು ವ್ಯಂಗ್ಯವಾಡಿದ ಸಿಎಂ
ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಏಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಿಲ್ಲ ವಿರೋಧ ಪಕ್ಷವನ್ನು ಕುಟುಕಿದ್ದಾರೆ. ‘‘ಕಾಂಗ್ರೆಸ್ ಪಕ್ಷಕ್ಕೆ ವಯಸ್ಸಾಗಿ ಮುಪ್ಪು ಬಂದಿದೆ ಎಂದು ಕರ್ನಾಟಕದ ಜನ ತಿರಸ್ಕರಿಸಿದ್ದಾರೆ. ನಮ್ಮ ಕೈಯಲ್ಲಿ ಅಧಿಕಾರ ಇಲ್ಲವೆಂದು ಕಾಂಗ್ರೆಸ್ ಪಕ್ಷದ ನಾಯಕರು ಹತಾಶರಾಗಿದ್ದಾರೆ. ಅಧಿಕಾರದಲ್ಲಿದ್ದಾಗ ಏಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಪಡಿಸಿಲ್ಲ’’ ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ನ ಹಣ ಬಲ ಬಿಜೆಪಿಯ ಜನ ಬಲದ ನಡುವೆ ಸಂಘರ್ಷವಿದೆ. ಹಣ ಹಾಗೂ ಜನ ಬಲದ ನಡುವೆ ಹೋರಾಟ ನಡೆದಾಗ ಗೆದ್ದದ್ದು ಜನ ಬಲ. ಇದನ್ನು ನಾನು ಕಾಂಗ್ರೆಸ್ ನಾಯಕರಿಗೆ ಹೇಳಲು ಬಯಸುತ್ತೇನೆ ಎಂದರು.

ಜಿಲ್ಲೆ

ರಾಜ್ಯ

error: Content is protected !!