Thursday, July 25, 2024

ನಾಗಮೋಹನ ದಾಸ್ ವರದಿಯನ್ನು ಮತ್ತೊಮ್ಮೆ ಶಿಫಾರಸು ಮಾಡಿ, ರಾಜ್ಯ ಸರ್ಕಾರಕ್ಕೆ ಬಿ.ಎಮ್. ಚಿಕ್ಕನಗೌಡರ ಆಗ್ರಹ

ಸುದ್ದಿ ಸದ್ದು ನ್ಯೂಸ್

ಬೆಳಗಾವಿ: ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನ ಕಲ್ಪಿಸುವಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ್ ವರದಿಯಂತೆ ಹಿಂದಿನ‌ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದನ್ನು ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಿಂದಿರುಗಿಸಿದ್ದು ಈ ವರದಿಯನ್ನು ಸಕಾರಾತ್ಮಕವಾಗಿ ಮತ್ತೊಮ್ಮೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಮಸ್ತ ಲಿಂಗಾಯತ ಹೋರಾಟ ಸಮಿತಿಯ ಮುಖ್ಯಸ್ಥರು ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಬಿ.ಎಮ್. ಚಿಕ್ಕನಗೌಡರ ಇತ್ತೀಚೆಗೆ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಸೇರಿದಂತೆ ಇನ್ನೂ ಅನೇಕರು ಆಗಮಿಸಿ ಮನವಿಯನ್ನು ಪರಿಶೀಲಿಸಿದರು ಹಾಗೂ ಸಮಸ್ತ ಲಿಂಗಾಯತ ಹೋರಾಟ ಸಮಿತಿಯ ಮುಖ್ಯಸ್ಥರನ್ನು ಬೆಂಬಲಿಸಿದರು. 

ಭಾರತೀಯ ಜನತಾ ಪಕ್ಷದ ರಾಜ್ಯ ಸರ್ಕಾರವು ಈ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸಿ ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಕಾರಾತ್ಮಕವಾಗಿ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ

ಈ ವೇಳೆ ಜಾಗತಿಕ ಲಿಂಗಾಯತ ಮಹಾಸಭಾದ ಬೆಳಗಾವಿ ಜಿಲ್ಲಾ ಅಧ್ಯಕ್ಷರು ಖ್ಯಾತ ನ್ಯಾಯವಾದಿಗಳಾದ ಬಸವರಾಜ ರೊಟ್ಟಿ, ರಾಷ್ಟ್ರೀಯ ಬಸವ ಸೇನೆಯ ಸಂಸ್ಥಾಪಕ ಅಧ್ಯಕ್ಷರು ಸುದ್ದಿ ಸದ್ದು ನ್ಯೂಸ್ ಡಾಟ್ ಕಾಮ್‌ನ ಸಂಪಾದಕರಾದ ಉಮೇಶ ಗೌರಿ ಸೇರಿದಂತೆ ಲಿಂಗಾಯತ ಸಮಾಜದ ಮುಖಂಡರು ಇದ್ದರು.

ಜಿಲ್ಲೆ

ರಾಜ್ಯ

error: Content is protected !!