Monday, September 30, 2024

ಅಕ್ರಮದ ಆರೋಪ ಹಿನ್ನೆಲೆ: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ

ಬೆಂಗಳೂರು, ಫೆಬ್ರವರಿ 8: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಂದೇ ತಾಲೂಕಿನಲ್ಲಿ 56 ಅಭ್ಯರ್ಥಿಗಳ ಆಯ್ಕೆ*https://suddisaddu.com/News-ID.4362/

ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 371 (ಜೆ) ಮೀಸಲಾತಿಯಲ್ಲಿ ಅನ್ಯಾಯ ಮತ್ತು ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕೆಲ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಕೈಗೊಳ್ಳುವಂತೆ ಜನವರಿ 21ರಂದು ಬರೆದಿದ್ದ ಪತ್ರದಲ್ಲಿ ಸೂಚಿಸಲಾಗಿತ್ತು. ಇದೀಗ ಆಡಳಿತಾತ್ಮಕ ಕಾರಣದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರಗೆ ಸ್ಥಗತಗೊಳಿಸಬೇಕು ಎಂದು ತಿಳಿಸಲಾಗಿದೆ.

 

ಜಿಲ್ಲೆ

ರಾಜ್ಯ

error: Content is protected !!