Saturday, July 20, 2024

ನೂತನ ಕಸಾಪ ಅಧ್ಯಕ್ಷರಾದ ಎನ್.ಆರ್ ಠಕ್ಕಾಯಿ ಅವರಿಗೆ ಸನ್ಮಾನ

ಬೈಲಹೊಂಗಲ: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಎನ್.ಆರ್ ಠಕ್ಕಾಯಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎನ್.ಕಸಾಳೆ ಮಾತನಾಡಿ ಪರಿಷತ್ತಿನಿಂದ ಕನ್ನಡದ ವಿನೂತನ ಕಾರ್ಯಕ್ರಮಗಳು ಜರುಗಲಿ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು, ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. ಬಿ.ಆರ್.ಪಿ ಅಜ್ಜಪ್ಪ ಅಂಗಡಿ ನಿರೂಪಿಸಿದರು. ಬಿ.ಆರ್.ಪಿ ಚಳಕೊಪ್ಪ ಸ್ವಾಗತಿಸಿದರು. ಸಿ.ಆರ್.ಪಿ ಪರಶುರಾಮ ಸೊಂಟಕ್ಕಿ ವಂದಿಸಿದರು.

ಜಿಲ್ಲೆ

ರಾಜ್ಯ

error: Content is protected !!