Thursday, July 25, 2024

ಸ್ಯಾಂಡಲ್​ವುಡ್​ನ ಹಿರಿಯ ನಟಿ  ಭಾರ್ಗವಿ ನಾರಾಯಣ್ ವಿಧಿವಶ.

ಸ್ಯಾಂಡಲ್​ವುಡ್​ನ ಹಿರಿಯ ನಟಿ  ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟಿ  ಭಾರ್ಗವಿ ನಾರಾಯಣ್ ಬೆಂಗಳೂರಲ್ಲಿ ಕೊನೆಯುಸಿರೆಳೆದಿದ್ದಾರೆ. 

ಭಾರ್ಗವಿ ನಾರಾಯಣ್ ರಂಗಭೂಮಿಯ ಕಲಾವಿದೆಯಾಗಿದ್ದರು. ಭಾರ್ಗವಿ ನಾರಾಯಣ್ ಅವರು ಕೆಲವು ಪ್ರಸಿದ್ಧ ಚಿತ್ರಗಳಲ್ಲಿ ನಟಿಸಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು 22 ಚಿತ್ರಗಳಲ್ಲಿ ನಟಿಸಿದ್ದಾರೆ.  ಮುಕ್ತಾ ಸೀರಿಯಲ್​ ಸೇರಿದಂತೆ ಹಲವು ನಾಟಕಗಳಲ್ಲೂ ಅಭಿನಯಿಸಿದ್ದಾರೆ. 

ಭಾರ್ಗವಿಯವರು 1938 ಫೆಬ್ರವರಿ 4ನೇ ತಾರೀಖಿನಂದು ಜನಿಸಿದ್ದರು. ನಾಮಗಿರಿಯಮ್ಮ ಮತ್ತು ಎಂ. ರಾಮಸ್ವಾಮಿ ದಂಪತಿಯ ಪುತ್ರಿ. ಬಳಿಕ ರಂಗಭೂಮಿಯಲ್ಲಿ ‘ಮೇಕಪ್‌ ನಾಣಿ’ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರನ್ನು ಮದುವೆಯಾದರು. ಸುಜಾತಾ, ನಟ ಪ್ರಕಾಶ್ ಬೆಳವಾಡಿ, ಪ್ರದೀಪ್ ಮತ್ತು ನಟಿ ಸುಧಾ ಬೆಳವಾಡಿ ಇವರ ಮಕ್ಕಳು. ಭಾರ್ಗವಿ ಅವರು ಬಿಎಸ್ಸಿ ಮತ್ತು ಇಂಗ್ಲಿಷ್‌ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ‘ನಾ ಕಂಡ ನಮ್ಮವರು’ ಕೃತಿಯನ್ನು ರಚಿಸಿದ್ದರು. ಪುನೀತ್ ರಾಜ್‌ಕುಮಾರ್ ಅಭಿನಯದ ‘ರಾಜಕುಮಾರ’ ಚಿತ್ರದಲ್ಲಿಯೂ ಅತ್ತ್ಯುತ್ತಮವಾಗಿ ನಟಿಸಿದ್ದರು.

Koo App

ಹಿರಿಯ ನಟಿ, ರಂಗಭೂಮಿ ಕಲಾವಿದೆ ಶ್ರೀಮತಿ ಭಾರ್ಗವಿ ನಾರಾಯಣ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಕಿರುತರೆಗೆ ತುಂಬಲಾರದ ನಷ್ಟವಾಗಿದೆ. ತಮ್ಮ ಸಹಜ ಅಭಿನಯದಿಂದ ಕನ್ನಡಿಗರ ಪಾಲಿನ ಪ್ರೀತಿಯ ಅಜ್ಜಿಯಾಗಿದ್ದ ಶ್ರೀಮತಿ ಭಾರ್ಗವಿ ನಾರಾಯಣ್ ಅವರು ಟಿ.ಎನ್.ಸೀತಾರಾಮ್ ಅವರ ಮುಕ್ತ ಧಾರಾವಾಹಿಯಲ್ಲಿ ಅಜ್ಜಿ ಪಾತ್ರದ ಮೂಲಕ ಮನೆ ಮಾತಾಗಿದ್ದರು. (1/2)

Dr. Sudhakar K (@drsudhakark.official) 14 Feb 2022

ಭಾರ್ಗವಿ ನಾರಾಯಣ್ ಅವರು 22 ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ ಸೀರಿಯಲ್​ ಸೇರಿದಂತೆ ಕನ್ನಡದಲ್ಲಿ ಅನೇಕ ನಾಟಕಗಳಲ್ಲಿ ನಟಿಸಿದ್ದಾರೆ. ಅವರು ಮಹಿಳಾ ಕಾರ್ಯಕ್ರಮಗಳಿಗಾಗಿ ಮತ್ತು ಮಹಿಳಾ ಸಂಘದ ಮಕ್ಕಳಿಗಾಗಿ ಕರ್ನಾಟಕ ನಾಟಕಗಳನ್ನು ಬರೆದಿದ್ದಾರೆ ಮತ್ತು ನಿರ್ದೇಶಿಸಿದ್ದಾರೆ. ಅವರು ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುವ ಮುನ್ನ, ಭಾರ್ಗವಿ ಅವರು ಬೆಂಗಳೂರಿನ ಇಎಸ್ಐ ಕಾರ್ಪೊರೇಷನ್ ಅಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಅವರು ಬೆಂಗಳೂರಿನ ಅಂಕಿತಾ ಪುಸ್ತಕ ಪ್ರಕಟಿಸಿದ ‘ನಾ ಕಂಡ ನಮ್ಮವರ’ ಎಂಬ ಕನ್ನಡದಲ್ಲಿ ಪುಸ್ತಕವನ್ನು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು – ಅತ್ಯುತ್ತಮ ಪೋಷಕ ನಟಿ (1974-75), ಕರ್ನಾಟಕ ರಾಜ್ಯನಾಟಕ ಅಕಾಡೆಮಿ ಪ್ರಶಸ್ತಿಗಳು (1998) ಮಂಗಳೂರು ಪ್ರತಿಷ್ಠಿತ ಸಂದೇಶ ಪ್ರಶಸ್ತಿ, ಆಳ್ವಾಸ್ ನಡಿಸಿರಿ ಪ್ರಶಸ್ತಿ(2005) ಕರ್ನಾಟಕ ರಾಜ್ಯ ನಾಟಕ ಸ್ಪರ್ಧೆ – ಅತ್ಯುತ್ತಮ ನಟಿ (ಎರಡು ಬಾರಿ), ಕರ್ನಾಟಕ ರಾಜ್ಯ ಮಕ್ಕಳ ನಾಟಕ ಸ್ಪರ್ಧೆ (1974-75) – ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ.


ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಇಂದು ನಿಧನರಾಗಿದ್ದಾರೆ. ಸರಳ ಅಭಿನಯದ ಮೂಲಕ ಕನ್ನಡಿಗರ ಮನೆ ಮನಗಳಲ್ಲಿ ಪ್ರೀತಿ ಹಂಚಿದ್ದ ಕಿರುತೆರೆಯ ಅಜ್ಜಿಯಾಗಿದ್ದ ಭಾರ್ಗವಿ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಕ್ಷಯ್​ ಕುಮಾರ್ ನಟನೆಯ ‘ಏರ್​ಲಿಫ್ಟ್​’ ಸೇರಿ ಹಲವು ಪರಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸುಧಾ ಮಗಳು ಸಂಯುಕ್ತಾ ಹೊರನಾಡು ಅವರು ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವೇ ವಾರಗಳ ಹಿಂದೆ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ತೆರೆಗೆ ಬಂದಿತ್ತು.

ಭಾರ್ಗವಿ ನಿಧನ ಹೊಂದಿರುವುದು ಸ್ಯಾಂಡಲ್​ವುಡ್​ಗೆ ತುಂಬಲಾರದ ನಷ್ಟವಾಗಿದೆ. ಅವರನ್ನು ಕಳೆದುಕೊಂಡ ಸ್ಯಾಂಡಲ್​ವುಡ್​ ಬಡವಾಗಿದೆ. ಅವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

Koo App

ಸಹಜ ಅಭಿನಯದ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಹಿರಿಯ ನಟಿ ಹಾಗೂ ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್ ಅವರ ನಿಧನದ ಸುದ್ದಿ ತಿಳಿದು ಅಘಾತವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅಭಿಮಾನಿಗಳು ಹಾಗೂ ಕುಟುಂಬ-ಹಿತೈಷಿಗಳಿಗೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.

Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 14 Feb 2022

ಭಾರ್ಗವಿ ಅವರು 1960ರ ಸಮಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ‘ಪ್ರೊ. ಹುಚ್ಚುರಾಯ’ ಚಿತ್ರದಲ್ಲಿ ಅವರು ಪೋಷಕ ಪಾತ್ರ ಮಾಡಿದ್ದರು. ಈ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಇದಲ್ಲದೆ, ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. 2012ರಲ್ಲಿ ‘ನಾನು, ಭಾರ್ಗವಿ’ ಎಂಬ ಅವರ ಆತ್ಮಕಥನ ಬಿಡುಗಡೆ ಆಗಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿರೋದು ವಿಶೇಷ.

ಜಿಲ್ಲೆ

ರಾಜ್ಯ

error: Content is protected !!