Tuesday, September 17, 2024

ಬೆಳಗಾವಿ ಕಸಾಪ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಗೆ ಮಲ್ಲಿಕಾರ್ಜುನ ಕೋಳಿ ನೇಮಕ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ನೂತನ ಸದಸ್ಯರಾಗಿ ಸವದತ್ತಿ ತಾಲೂಕಿನ ಹೂಲಿಕೇರಿ ತಾಂಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ ಸದೆಪ್ಪ ಕೋಳಿ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು
ಕೋಳಿ ಅವರಿಗೆ ಕನ್ನಡ ಧ್ವಜ ನೀಡಿ ಗೌರವಿಸಿದರು.

ಕೋಳಿಯವರು ಪ್ರಾಥಮಿಕ ಶಾಲಾ ಸಹಶಿಕ್ಷಕರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಕ್ಕಾಗಿ ಇವರಿಗೆ ಜನಮೆಚ್ಚಿದ ಶಿಕ್ಷಕ, ಜಿಲ್ಲಾ ಆದರ್ಶ ಶಿಕ್ಷಕ, ಡಾ. ಸ. ಜ. ನಾಗಲೋಟಿಮಠ ಆದರ್ಶ ಶಿಕ್ಷಕ ಪ್ರಶಸ್ತಿಗಳು ದೊರೆತಿವೆ. ಇಸ್ಕಾನ್ ಹಾಗೂ ಇನ್ನಿತರ ಅನೇಕ ಸಂಘ ಸಂಸ್ಥೆಗಳು ಪ್ರಶಂಸಾ ಪತ್ರ ನೀಡಿ ಗೌರವಿಸಿವೆ. ಶಿಕ್ಷಣ ಇಲಾಖೆಯಲ್ಲಿ ಇವರು ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುವದರೊಂದಿಗೆ ಜಿಲ್ಲಾ ಮತ್ತು ರಾಜ್ಯ ಹಂತದ ಹಲವಾರು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗಿಯಾಗಿದ್ದಾರೆ.

2014 ರಿಂದ 2019 ರವರೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಬೆಳಗಾವಿ ಜಿಲ್ಲಾ ಘಟಕದ ಸಹಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಈಗ ಸವದತ್ತಿ ತಾಲೂಕಿನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೈಲಹೊಂಗಲ ಕನ್ನಡ ಜಾನಪದ ಪರಿಷತ್ತ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾ ಮಟ್ಟದ ಕವಿಗೋಷ್ಠಿ ಹಾಗೂ ಹಲವಾರು ಜಾನಪದ ಕಲೆ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ.

ಇವರು ಅನೇಕ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು ಇವರ ಕವನಗಳು ಹಲವಾರು ಪುಸ್ತಕಗಳಲ್ಲಿ ಪ್ರಕಟಗೊಂಡಿವೆ. ಕಾರ್ಯಕ್ರಮ ನಿರೂಪಣೆ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಉಪನ್ಯಾಸ ನೀಡಿದ್ದಾರೆ. ವಚನ ಕಂಠಪಾಠ, ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕವಿಗೋಷ್ಠಿ ಮುಂತಾದವುಗಳನ್ನು ಸಂಘಟಿಸಿರುವ ಇವರು ಹಲವಾರು ಸಾಂಸ್ಕೃತಿಕ ಸ್ಪರ್ಧೆಗಳಿಗೆ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!