Tuesday, May 28, 2024

ಮಾರ್ಚ್ 12ರ ಒಳಗೆ ತಾಲ್ಲೂಕು ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಮುಕ್ತಾಯಗೊಳಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಚಿಕ್ಕಬಳ್ಳಾಪುರ: 2021-22 ನೇ ಸಾಲಿನ ತಾಲ್ಲೂಕು ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಮಾರ್ಚ್ 12ರ ಒಳಗೆ ನಡೆಸಿ ಮುಕ್ತಾಯಗೊಳಿಸುವಂತೆ ಹಾಗೂ ಮಾರ್ಚ್ 12ರ ನಂತರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್,ಲತಾ ಅವರು ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22ನೇ ಸಾಲಿನ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳ ಆಯೋಜನೆಯ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ -19ರ ಮಾರ್ಗಸೂಚಿಯ ನಿಯಮಗಳನ್ನು ಪಾಲಿಸಿಕೊಂಡು ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳನ್ನು ನಡೆಸಬೇಕು. ಜಿಲ್ಲಾಮಟ್ಟದ ಕ್ರೀಡಾ ಕೂಟವನ್ನು ಜಿಲ್ಲಾ ಕೇಂದ್ರದ ಸರ್.ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಆಗಮನದ ದಿನಾಂಕವನ್ನು ಪಡೆದುಕೊಂಡು ಮಾರ್ಚ್ 12ರ ನಂತರ ಆಯೋಜಿಸಬೇಕು. ಅಷ್ಟರೊಳಗೆ ತಾಲ್ಲೂಕು ಮಟ್ಟದ ಕ್ರೀಡಾ ಕೂಟಗಳನ್ನು ಮುಕ್ತಾಯಗೊಳಿಸಿ ಅದರಲ್ಲಿ ಆಯ್ಕೆಯಾದವರಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಿಸ್ತುಬದ್ಧವಾಗಿ ಆಯೋಜಿಸುವಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕ್ರೀಡಾಕೂಟ ಆಯೋಜನೆಯ ಕುರಿತು ಸಲಹೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ಉಪಾಧ್ಯಕ್ಷರಾದ ಗಂಗಾಧರ್,ಶ್ರೀನಿವಾಸ್ ,ಬಸವರಾಜ್, ಗೌರವಾಧ್ಯಕ್ಷರಾದ ಶಂಕರ್ ರೆಡ್ಡಿ, ಕ್ರೀಡಾ ಕಾರ್ಯದರ್ಶಿಗಳಾದ ಶಿವಶಂಕರ್, ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ನಾಗರಾಜು, ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರುಗಳಾದ ಚಿಂತಾಮಣಿ-ಜನಾರ್ಧನ ರೆಡ್ಡಿ, ಶಿಡ್ಲಘಟ್ಟ- ಸುಬ್ಬಾರೆಡ್ಡಿ, ಬಾಗೇಪಲ್ಲಿ-ಸತ್ಯನಾರಾಯಣರೆಡ್ಡಿ, ಗೌರಿಬಿದನೂರು-ಸಿಂಹಾದ್ರಿ,
ಗುಡಿಬಂಡೆ-ಕೆ.ವಿ.ನಾರಾಯಣಸ್ವಾಮಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥತರಿದ್ದರು.

ವರದಿ: ಎ ಧನಂಜಯ್ .ಚಿಕ್ಕಬಳ್ಳಾಪುರ

ಜಿಲ್ಲೆ

ರಾಜ್ಯ

error: Content is protected !!