Monday, April 15, 2024

ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರನ್ನು ಸನ್ಮಾನಿಸಿದ ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ

ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರನ್ನು ಧಾರವಾಡ ರಂಗಾಯಣ ನಿರ್ದೇಶಕರಾದ ರಮೇಶ ಎಸ್. ಪರವಿನಾಯ್ಕರ ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಅವರು ಇತ್ತೀಚೆಗೆ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ ಹೋಟಿಯವರ ಶ್ರದ್ಧೆ,ಪ್ರಾಮಾಣಿಕತೆ,ಕ್ರಿಯಾಶೀಲತೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹೋಟಿಯವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇನ್ನೂ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದರು. 

ಈ ವೇಳೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ತಾಲ್ಲೂಕು ಕಸಾಪ ಅಧ್ಯಕ್ಷ ಎನ್. ಆರ್. ಠಕ್ಕಾಯಿ ಮತ್ತು ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಕೋಳಿ ಉಪಸ್ಥಿತರಿದ್ದರು.

ಜಿಲ್ಲೆ

ರಾಜ್ಯ

error: Content is protected !!