Thursday, July 25, 2024

ನಾಳೆ ಎಲ್ಲ ತಾಲೂಕುಗಳಲ್ಲೂ ಪ್ರತಿಭಟನೆ!ಈಶ್ವರಪ್ಪ ವಜಾ ಆಗುವವರೆಗೆ ಅಧಿವೇಶನ ನಡೆಯಲು ಬಿಡಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾವು ಬಚ್ಚಲು ಬಾಯಿ ಈಶ್ವರಪ್ಪನ ವಜಾ ಬೇಡಿಕೆ ಈಡೇರುವವರೆಗೆ ಅಧಿವೇಶನ ನಡೆಯಲು ಬಿಡುವುದಿಲ್ಲಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ವಿಧಾನಸಭೆಯಲ್ಲಿಅಹೋರಾತ್ರಿ ರಾತ್ರಿ ಧರಣಿ ನಡೆಸುತ್ತಿರುವ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ”ಕಲಾಪ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಿಡಿದು ತಪ್ಪು ಮಾಡಿದ್ದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕೂ ಮೊದಲು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ,” ಎಂದು ಒತ್ತಾಯಿಸಿದರು.

ಪೋಲಿಸರು ಕೇಸರಿ ವಸ್ತ್ರ ಧರಿಸಲು ”ದೇಶದ್ರೋಹದ ಹೇಳಿಕೆ ಕೊಟ್ಟ ಈಶ್ವರಪ್ಪನ ವಿರುದ್ಧ ಪ್ರಕರಣ ದಾಖಲಿಸದೆ, ಅವರ ಹೇಳಿಕೆ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಾನು ಎಸ್ಪಿ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಮಾತನಾಡುತ್ತೇನೆ. ಅವರು ಪೊಲೀಸ್‌ ಸಮವಸ್ತ್ರ ಕಳಚಿ ಕೇಸರಿ ಬಟ್ಟೆ ಧರಿಸಿ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಹೇಳುತ್ತೇನೆ,” ಎಂದು ಗುಡುಗಿದರು.

ಸಿಎಂ ಕೂಡ ಕೈಗೊಂಬೆ: ”ಸಿಎಂ ನಿಷ್ಪಕ್ಷಪಾತರಾಗಿದ್ದಾರೆ ಎಂದುಕೊಂಡಿದ್ದೆ. ಆದರೆ ಅವರೂ ಕೈಗೊಂಬೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಕೆಲಸ ಮಾಡುತ್ತಿಲ್ಲ. ಅವರ ಮೊದಲ ಆದ್ಯತೆ ಪಕ್ಷದ ಅಜೆಂಡಾ. ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಅದರಂತೆ ನಡೆದುಕೊಳ್ಳುತ್ತಿಲ್ಲ,” ಎಂದು ದೂರಿದರು.

ಮೇಕೆದಾಟು ಪಾದಯಾತ್ರೆಯನ್ನು ಇದೇ 27ರಿಂದ ಪುನಾರಂಭಿಸುತ್ತಿದ್ದು, ಈ ವಿಚಾರವಾಗಿ ಸಿಎಂ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅದರಂತ ತಯಾರಿ ನಡೆದಿದ್ದು, ಬೆಳಗ್ಗೆ ಎದ್ದು ನಡೆಯುತ್ತಿದ್ದೇವೆ,” ಎಂದು ಹೇಳಿದರು. ”ರಾಜ್ಯದ ನೀರಾವರಿ ವಿಚಾರದಲ್ಲಿ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಡಬಲ್‌ ಎಂಜಿನ್‌ ಸರಕಾರವಿದ್ದು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು. ಈ ಯೋಜನೆ ಮಾಡುವುದಾಗಿ ಸಿಎಂ ಹೇಳಿಕೆ ನೀಡಿದರೆ ಸಾಲದು. ಅಸೂಚನೆ ಹೊರಡಿಸಿ ಭೂಮಿ ವಶಪಡಿಸಿಕೊಳ್ಳಬೇಕು. ಭೂಮಿ ಪೂಜೆ ಮಾಡಬೇಕು,” ಎಂದು ಒತ್ತಾಯಿಸಿದರು.

ನಾಳೆ ಎಲ್ಲ ತಾಲೂಕುಗಳಲ್ಲೂ ಪ್ರತಿಭಟನೆ!
ಈಶ್ವರಪ್ಪನನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ನಂತರ ಹಳ್ಳಿ, ಹಳ್ಳಿಗೆ ಹೋಗಿ ಜನರ ಮಧ್ಯೆ ಹೋರಾಟ ನಡೆಸುತ್ತೇವೆ, ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಕೆಂಪುಕೋಟೆ ಮೇಲೆ ಒಂದು ದಿನ ಭಗವಾಧ್ವಜ ಹಾರಾಡಲಿದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಇದೆ.

ಜಿಲ್ಲೆ

ರಾಜ್ಯ

error: Content is protected !!