Saturday, July 27, 2024

ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿಎಂ ಗೆ ಮನವಿ ಸಲ್ಲಿಸಿದ:ವಿಧಾನ ಪರಿಷತ್ತಿನ ಸದಸ್ಯರು

ಬೆಂಗಳೂರು: ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಮೀಸಲಿರಿಸು ವಂತೆ ಭಾರತೀಯ ಜನತಾ ಪಾರ್ಟಿಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ಫೆ.22 ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಬೇಟಿ ಮಾಡಿ ಪತ್ರ ಮುಖಾಂತರ ಮನವಿ ಸಲ್ಲಿಸಿದರು.

ಮನವಿ ವಿವರ: ◆ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಅನುದಾನ ಮೀಸಲಿಡುವುದು,

◆ 1995 ರ ನಂತರ ಆರಂಭಗೊಂಡ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು,
◆ ಕಾಲ್ಪನಿಕ‌ ವೇತನ ಬಡ್ತಿ ಸಮಸ್ಯೆ ಬಗೆಹರಿಸುವುದು
◆ಅನುದಾನ ಸಿಬ್ಬಂದಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸುವುದು,
◆ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವುದು,
◆ಅನುದಾನ ರಹಿತ ಐ.ಟಿ.ಐ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು
◆1987-95ರ‌ ಮದ್ಯದಲ್ಲಿ ಆರಂಭಗೊಂಡ ಸಾಮಾನ್ಯ ಆಡಳಿತ ಮಂಡಳಿಯ ಅನುದಾನ‌ ರಹಿತ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು
◆ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವುದು,
◆ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವೈದ್ಯಕೀಯ ವೆಚ್ಚ ಪಾವತಿ ಮಾಡುವುದು,
◆ಆರ್ಥಿಕ‌ ಮಿತವ್ಯಯದ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆಯುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಮನವಿ ಸಲ್ಲಿಸಿದರು.

ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ಮು ಬಗೆಹರಿಸುವ ಭರವಸೆ ನೀಡಿದರು.

ಜಿಲ್ಲೆ

ರಾಜ್ಯ

error: Content is protected !!