Wednesday, July 24, 2024

ಸರ್ಕಾರಿ ನೌಕರರಿಗೆ NPS ರದ್ದುಪಡಿಸಲು ಬಸವರಾಜ ಹೊರಟ್ಟಿ ಒತ್ತಾಯ.

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿ ನಂತರ ಅಗತ್ಯ ಸೌಲಭ್ಯಗಳು ಸಿಗುವುದಿಲ್ಲ. ಆರ್ಥಿಕ ಸೌಲಭ್ಯ ದೊರೆಯದೆ ಜೀವನ ಕಷ್ಟಸಾಧ್ಯವಾಗಿದೆ. ರಾಜಸ್ಥಾನ ಸರ್ಕಾರವು ಹೊಸ ಮಾದರಿಯ ಪಿಂಚಣಿ ಯೋಜನೆ ರದ್ದುಗೊಳಿಸಿದೆ.

ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನ ಮತ್ತಿತರ ಸೌಲಭ್ಯ ನೀಡುವ ನಿಟ್ಟನಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿರುವ ತಾರತಮ್ಯಕ್ಕೆ ಅಂತ್ಯ ಹಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ನ್ಯಾಯ ಒದಗಿಸಿಕೊಡಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಭಾಪತಿ ಹೊರಟ್ಟಿ ಕೋರಿಕೆ ಸಲ್ಲಿಸಿದ್ದಾರೆ.

ರಾಜಸ್ಥಾನ ಸರ್ಕಾರವು ಫೆ 23ರಂದು ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಅಲ್ಲಿನ ಸ್ಥಳೀಯ ರಾಜ್ಯ ಸರ್ಕಾರಿ ನೌಕರರ ಭವಿಷ್ಯಕ್ಕೆ ಸುರಕ್ಷೆ ಒದಗಿಸಿದೆ. ಇದು ಸ್ವಾಗತಾರ್ಹ ಘೋಷಣೆಯಾಗಿದ್ದು, ರಾಜಸ್ಥಾನದ ಸರ್ಕಾರಿ ನೌಕರರಿಗೆ ನಿವೃತ್ತಿ ನಂತರವೂ ಭವಿಷ್ಯಕ್ಕೆ ಸುಭದ್ರತೆ ಒದಗಿಸಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಏಪ್ರಿಲ್ 1, 2006ರ ನಂತರ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿಯ ನಂತರ ಯಾವುದೇ ರೀತಿಯ ಆರ್ಥಿಕ ಸೌಲಭ್ಯ ದೊರೆಯದೇ ಜೀವನೋಪಾಯ ಕಷ್ಟಸಾಧ್ಯವಾಗಿದೆ. ಆದುದರಿಂದ ರಾಜಸ್ಥಾನ ಸರ್ಕಾರದ ಮಾದರಿಯಂತೆ ತಾವು ಸಹ ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಅಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರ ಪ್ರಕಟಿಸಬೇಕು. ಈ ಮೂಲಕ ಸರ್ಕಾರಿ ನೌಕರರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಬೇಕೆಂದು ಕೋರುತ್ತೇನೆ ಎಂದಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತಿತರ ಸೌಲಭ್ಯ ನೀಡುವ ನಿಟ್ಟಿನಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿರುವ ತಾರತಮ್ಯಕ್ಕೆ ಅಂತ್ಯ ಹಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!