Saturday, July 27, 2024

ರಾಜಸ್ಥಾನ ಮಾದರಿಯಂತೆ ಕಾರ್ನಾಟಕ ಸರ್ಕಾರವು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು; ಹಣಮಂತ ನಿರಾಣಿ 

ಸುದ್ದಿ ಸದ್ದು ನ್ಯೂಸ್:

ಚನ್ನಮ್ಮನ ಕಿತ್ತೂರು: ರಾಜಸ್ಥಾನ ಸರ್ಕಾರವು ಇಂದು ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಜಸ್ಥಾನ ಸರ್ಕಾರದ ಸರ್ಕಾರಿ ನೌಕರರ ಭವಿಷ್ಯಕ್ಕೆ ಭದ್ರತೆ ಒದಗಿಸಿದೆ. 

ಇದು ಉತ್ತಮ ಬೆಳವಣಿಗೆಯಾಗಿದ್ದು ರಾಜಸ್ಥಾನ ಸರ್ಕಾರ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ಜೀವನಕ್ಕೆ ಭದ್ರತೆ ಒದಗಿಸಿದೆ.

ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ದಿ: 01-04-2006 ರ ನಂತರ ಸರ್ಕಾರಿ

ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದ್ದು ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿಯ ನಂತರ ಯಾವುದೇ ರೀತಿಯ ಸೌಲಭ್ಯಗಳಿಲ್ಲದೇ ಜೀವನ ನಡೆಸಲು ಕಷ್ಟವಾಗುತ್ತಿದೆ ಆದ್ದರಿಂದ ರಾಜಸ್ಥಾನ ಸರ್ಕಾರದ ಮಾದರಿಯಂತೆ ಕಾರ್ನಾಟಕ ಸರ್ಕಾರವು ಸಹ ಮಾರ್ಚ 04 ರಂದು ಮಂಡಿಸುವ 2022-23 ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಈ ಹಿಂದೆ ಇದ್ದಂತಹ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು

ಪ್ರಕಟಿಸಬೇಕು ಮತ್ತು ಸಮಾನ ವೇತನ ಮತ್ತಿತರ ಸೌಲಭ್ಯ ನೀಡುವ ನಿಟ್ಟಿನಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದರೊಂದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ವೇತನದಲ್ಲಿ ಇರುವ ತಾರತ್ಯಮವನ್ನು ಸರಿಪಡಿಸಿ ರಾಜ್ಯದ ಸರ್ಕಾರಿ ನೌಕರರಿಗೆ ನ್ಯಾಯ ದೊರಕಿಸಿಕೊಡಬೇಕು ರಾಜ್ಯದ ಸಮಸ್ತ ಸರ್ಕಾರಿ ನೌಕರರರಲ್ಲಿ ಹೊಸ ಭರವಸೆ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ ಅವರು ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ

ಜಿಲ್ಲೆ

ರಾಜ್ಯ

error: Content is protected !!