Tuesday, May 28, 2024

ಅಮೃತಾ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಆನ್ವರಿ ಗ್ರಾಮ.

ಲಿಂಗಸುಗೂರು: ವಿಧಾನಸಭಾ ಕ್ಷೇತ್ರ ಅಮೃತಾ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸಲು ಗ್ರಾಮ ಸಭೆ ನಡೆಸಲಾಯಿತು.

ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ ಶಾಸಕ ಡಿ. ಎಸ್. ಹೂಲಗೇರಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು ಆನ್ವರಿ ಪಂಚಾಯಿತಿ ಕೇಂದ್ರದಲ್ಲಿ ಹಾಗೂ ಪಂಚಾಯ್ತಿ ವ್ಯಾಪ್ತಿಯ ಬರುವಂತ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ ಕುಡಿಯುವ ನೀರು ವಿದ್ಯುತ್ ಸಾರಿಗೆ ಸೌಲಭ್ಯ. ಇನ್ನು ಮುಂತಾದ ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗಳ ಕ್ರಿಯಾ ಯೋಜನೆ ಮಾಡುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಆನ್ವರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು..

ವರದಿ: ಮಂಜುನಾಥ ಕುಂಬಾರ

ಜಿಲ್ಲೆ

ರಾಜ್ಯ

error: Content is protected !!