Wednesday, September 18, 2024

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ:ಶಾಸಕ ರಾಜಶೇಖರ ಬಿ.ಪಾಟೀಲ  

ಬೀದರ್: ಮಾಜಿ ಸಚಿವರೂ ಆಗಿರುವ ಹಾಲಿ ಶಾಸಕ ರಾಜಶೇಖರ ಬಿ.ಪಾಟೀಲರಿಂದ ಜಿಲ್ಲೆಯ ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೊ ಲಸಿಕೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಮಕ್ಕಳ ದೈಹಿಕ ಸೇರಿದಂತೆ ಸರ್ವಾಂಗೀಣ ಬೆಳವಣಿಗೆಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವುದು ಅವಶ್ಯ. ಈ ವಿಷಯದಲ್ಲಿ ಅದನ್ನು ನೀವು ನಿರ್ಲಕ್ಷಿಸಿದರೇ ಅದು ನಿಮ್ಮ ನಿರ್ಲಕ್ಷಿಸಿ, ದೇಹದ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಲಾರಣ 5ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಾಲಕರು ತಪ್ಪದೇ ಪೋಲಿಯೊ ಹಾಕಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವಕುಮಾರ ಸಿದ್ದೇಶ್ವರ, ಆಸ್ಪತ್ರೆ ಮುಖ್ಯ ಆರೋಗ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ,ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿ ಡಾ.ಗೋವಿಂದ, ತಜ್ಞವೈದ್ಯ ಡಾ.ಬಸವಂತರಾವ ಗುಮ್ಮೇದ್, ಡಾ.ಪ್ರವೀಣ ಮುಳೆ ಮೊದಲಾದವರು ಇದ್ದರು.

ಜಿಲ್ಲೆ

ರಾಜ್ಯ

error: Content is protected !!