Saturday, June 15, 2024

ವಿಜ್ಞಾನ ಹಾಗೂ ಗಣಿತ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸುವುದರ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆ …

ಮುದಗಲ್ಲ:ವಿಜಯ ಮಹಾಂತೇಶ ಹಿ.ಪ್ರಾ.ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಮಕ್ಕಳು ವಿಜ್ಞಾನ ಹಾಗೂ ಗಣಿತ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ರಂಗೋಲಿಯ ಸಹಾಯದಿಂದ ಬಿಡಿಸುವುದರ ಮೂಲಕ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕ ಮಹಾಂತೇಶ ಮಾತನಾಡಿ ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ ಎಂದುರು.ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. ಅವರು 1928ರ ಫೆಬ್ರವರಿ 28ರಂದು ‘ರಾಮನ್ ಇಫೆಕ್ಟ್’ ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು.

ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು,

ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕರಾದ ಮಹಾಂತೇಶ ಬನ್ನಿಗೋಳ ,  ಮೈಮುನಾ ಬೇಗಂ  ಹಾಗು ಆನಂದ ಕುಮಾರ  ಹಾಗೂ ವಿಧ್ಯಾರ್ಥಿಗಳಾದ ಅಪ್ನಾನ ಚೇತನ ನಂದಿನಿ ಸಂಜನಾ ಶರಣಬಸವ ಅಪೂರ್ವ ಮಾಲನಿಯ ಅಲೋಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ: ಮಂಜುನಾಥ ಕುಂಬಾರ

ಜಿಲ್ಲೆ

ರಾಜ್ಯ

error: Content is protected !!