Monday, April 15, 2024

ಆರೋಗ್ಯ ಶಿಬಿರದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಿದ :ಸುರೇಶ್ ಇಟ್ನಾಳ್

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಮೇಶ್ವರ ಗ್ರಾಮದ ದೊಡ್ಡಕೆರೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಕೂಲಿ ಕಾರ್ಮಿಕರ ಜೊತೆ ನರೇಗಾ ಯೋಜನೆ ಬಗ್ಗೆ ಚರ್ಚಿಸಿ,ಹಾಗೂ ಕೂಲಿಕಾರರೊಂದಿಗೆ ಶ್ರಮದಾನ ಮಾಡಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ”ಯನ್ನು ಕೂಲಿಕಾರರ ಜೊತೆ ಕೇಕ್ ಕಟ್ ಮಾಡುವ ಮೂಲಕ ಆಚರಿಸಿದರು. ಹಾಗೂ”ಆರೋಗ್ಯ ಶಿಬಿರ” ಏರ್ಪಡಿಸಿ ಕೂಲಿಕಾರರ ಆರೋಗ್ಯ ತಪಾಸಣೆ ಮಾಡಲಾಯಿತು.ಅಲ್ಲದೆ ಈ ಕಾರ್ಯಕ್ರಮದಲ್ಲಿ 100 ದಿನ ಕೆಲಸ ಪೂರ್ಣಗೊಳಿಸಿದ ಕುಟುಂಬದ ಸದಸ್ಯರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ  ಸುರೇಶ್ ಇಟ್ನಾಳ ಹಾಗೂ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ  ತಾಲೂಕ ಕಾರ್ಯನಿರ್ವಾಹಕ ಅಧಿಕಾರಿ  ಶಿವಪುತ್ರಪ್ಪ ಮಠಪತಿ ಹಾಗೂ ಸಹಾಯಕ ನಿರ್ದೇಶಕರಾದ  ಚಂದ್ರು ಪೂಜಾರ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್ ಕೊಳೆರ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಸಾರ್ವಜನಿಕರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ನಿತಿಶಗೌಡ ತಡಸ

ಜಿಲ್ಲೆ

ರಾಜ್ಯ

error: Content is protected !!