Monday, April 15, 2024

ವಿದ್ಯೆಯೊಂದಿಗೆ ವಿನಯ, ಸೌಜನ್ಯಿಕೆಯನ್ನೂ ರೂಢಿಸಿಕೊಳ್ಳಿರಿ:ಬಿರಾದಾರ

ಯರಗಟ್ಟಿ : ವಿದ್ಯಾರ್ಥಿಗಳು ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವುದರೊಂದಿಗೆ, ವಿನಯ, ಸೌಜನ್ಯಿಕೆಯನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಶ್ರೀ ಸಿ.ಎಂ. ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.

ಸಮೀಪದ ಕಡಬಿಯ ಸರಕಾರಿ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆಗೆ ಹೆದರದೆ ನಿರಂತರವಾಗಿ ಅಧ್ಯಯನ ಮಾಡಬೇಕು. ದೊಡ್ಡ ಗುರಿಯೊಂದಿಗೆ ಏಕಾಗ್ರತೆಯ ಪ್ರಯತ್ನಶೀಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಪ್ರತಿಪಾದಿಸಿದರು.

ಕಳೆದ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಸತ್ಕರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಬಿರಾದಾರಗೌಡರ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸುಧಾರಣಾ ಸಮಿತಿಯ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ಜಿಲ್ಲೆ

ರಾಜ್ಯ

error: Content is protected !!