Friday, September 20, 2024

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಮತ್ತು ಮಾಸ್ಕ್ ಧಾರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಸುದ್ದಿ ಸದ್ದು ನ್ಯೂಸ್

ಬೆಂಗಳೂರು:  ಮಹಾಮಾರಿ ಕೋವಿಡ್ 19 ರ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು  ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಯಿತು. ಹಲವಾರು ಕೋವಿಡ್ 19 ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಕುರಿತು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಬರುವ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು  ವೀಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದು, ಅದಕ್ಕೂ ಮುನ್ನ ಇಂದಿನ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲವು ಮಾಹಿತಿ ಸಂಗ್ರಹಿಸಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲವು ಮಾರ್ಗ ಸೂಚಿಗಳನ್ನು ಪ್ರಕಟಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶ ಪತ್ರ

ಹೊಸ ಮಾರ್ಗಸೂಚಿಗಳು: ಸಾರ್ವಜನಿಕ ಮತ್ತು ಕರ್ತವ್ಯದ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತದೆ. 

ಪ್ರಯಾಣದ ವೆಳೆ ಎಲ್ಲಾ ಸ್ಥಳ ಮತ್ತು ವಾಹನಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. 

 ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ 2 ಅಡಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು.

 –

ಜಿಲ್ಲೆ

ರಾಜ್ಯ

error: Content is protected !!