Thursday, July 25, 2024

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ನ್ಯಾಯವಾದಿ ಹಿರೇಮಠ್ ವಿರುದ್ಧ ದೂರು

ಸುದ್ದಿ ಸದ್ದು ನ್ಯೂಸ್

ಬೆಂಗಳೂರು: ಅನುಸೂಚಿತ ಜಾತಿಯ ಪಟ್ಟಿಯಲ್ಲಿರುವ ಬೇಡ ಜಂಗಮ ಸಮುದಾಯಕ್ಕೆ ಸಿಗುವ ಮಿಸಲಾತಿಯನ್ನು ಇತರೆ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಇತರೆ ಇಲಾಖೆಗಳೊಂದಿಗೆ ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗೆ ಪರವಾನಿಗೆ ಇಲ್ಲದೆ ಏಕಾಏಕಿ ಗುಂಡಾಗಳಂತೆ ನುಗ್ಗಿ ದಾಂಧಲೆ ನಡೆಸಿದ್ದ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ನ್ಯಾಯವಾದಿ ಬಿ ಡಿ ಹಿರೇಮಠ ವಿರುದ್ದ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಳ್ಳು ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಾಸಕರ ಭವನದಲ್ಲಿ ಕಳೆದ ಏಪ್ರಿಲ್ 27‌ ರಂದು ನಡೆಸಿದ್ದ ಸಭೆಯಲ್ಲಿ ನ್ಯಾಯವಾದಿ ಬಿ ಡಿ ಹಿರೇಮಠ ಯಾವ ಅನುಮತಿ ಇಲ್ಲದೆ ಸಭೆಗೆ ನುಗ್ಗಿ ಸಮಿತಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ತಮ್ಮನ್ನು ನೋಡಿಕೊಳ್ಳುವುದಾಗಿ ಆವಾಜ್ ಹಾಕುವುದರ ಜತೆ ವಿಧಾನಸೌಧಕ್ಕೆ ಬೆಂಕಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಮಿತಿಯು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗಮನಕ್ಕೆ ತಂದಿತ್ತು. ಅವರ ನಿರ್ದೇಶನದಂತೆ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ವಸುಂಧರಾ ದೇವಿ ಸಿ ಅವರು ಇತ್ತೀಚೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನೇನಿದೆ ?

ದಿನಾಂಕ 27-04-2022 ರಂದು 11-30 ಗಂಟೆಗೆ అಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ನ್ಯಾಯವಾದಿ ಬಿ ಡಿ ಹಿರೇಮಠ್ ಸಮಿತಿ ಸಭೆಗೆ ಯಾವುದೇ ಅನುಮತಿ ಪಡೆಯದೇ ಏಕಾಏಕಿ ಅತಿಕ್ರಮವಾಗಿ ಪ್ರವೇಶಿಸಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಯಾವುದೇ ತರಹದ ಗೌರವ ಕೊಡೆದೇ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ವಿಷಯವನ್ನು ಚರ್ಚಿಸಲು ಅಡಚಣೆ ಉಂಟು ಮಾಡಿರುತ್ತಾರೆ. ಅಲ್ಲದೆ ಸಮಿತಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ಇಲಾಖಾ ಅಧಿಕಾರಿಗಳಿಗೆ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಅವಾಜ್ ಹಾಕುವುದರ ಜೊತೆ ವಿಧಾನಸೌಧಕ್ಕೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುತ್ತಾರೆ.

ಈ ವೇಳೆ ಸಮಿತಿಯ ಅಧ್ಯಕ್ಷರು ಸದಸ್ಯರು ಮತ್ತು ಇಲಾಖಾ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಲು ಅಡಚಣೆ ಉಂಟು ಮಾಡಿರುತ್ತಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಯ ಅಧ್ಯಕ್ಷರು ಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ಸೂಚನೆಯನ್ನು ಸಲ್ಲಿಸಿದ್ದಾರೆ. ಇವರ ವಿರುದ್ಧ ದೂರು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರು ನಿರ್ದೇಶಿಸಿದ್ದಾರೆ. ಈ ಸಭೆಯಲ್ಲಿ ಕಂದಾಯ, ಸಮಾಜ ಕಲ್ಯಾಣ, ಕಾನೂನು ಇಲಾಖೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಜಿಲ್ಲೆ

ರಾಜ್ಯ

error: Content is protected !!