Saturday, July 27, 2024

ಕೇವಲ 24 ಗಂಟೆಯಲ್ಲಿ ನೇರ ನೇಮಕಾತಿ ಆದೇಶ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ: ನಿತೇಶ್ ಪಾಟೀಲ

ಬೆಳಗಾವಿ: ಅನುಕಂಪ ಆಧಾರದ ಮೇಲೆ ಅವಲಂಬಿತರಿಗೆ ಕೇವಲ 24 ಗಂಟೆಯಲ್ಲಿ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರ್ತವ್ಯ ನಿಷ್ಠೆಯೊಂದಿಗೆ ಮಾನವಿಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ  ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು.  ಸಹೋದರ ಸೇವೆಯಲ್ಲಿರುವಾಗ ನಿಧನ ಹೊಂದಿರುವುದರಿಂದ ಕುಟುಂಬ ನಿರ್ವಹಣೆಗಾಗಿ ತಮಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಬಸವರಾಜ‌‌‌ ಮಹಾದೇವ ಬಾದುಲೆ  ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮೃತ ಸಚಿನ್ ಬಾದುಲೆ ಅವರ ಅವಲಂಬಿತ ಸಹೋದರ ಮಹಾದೇವ ಅವರನ್ನು ಕೇವಲ 24 ಗಂಟೆಗಳ ಅವಧಿಯಲ್ಲಿ ಗ್ರುಪ್ “ಸಿ” ಹುದ್ದೆಗೆ ನೇರ ನೇಮಕಾತಿ ಮಾಡುವ ಮೂಲಕ ಮಾನವಿಯತೆ ಮೆರೆದಿದ್ದಾರೆ.
ಬಿ.ಎ. ಪದವೀಧರರಾಗಿರುವ ಮಹಾದೇವ ಬಾದುಲೆ ಅವರನ್ನು ಪ್ರಥಮ ದರ್ಜೆ ಸಹಾಯಕರನ್ನಾಗಿ ನೇರ ನೇಮಕ‌ ಮಾಡಿ ಚಿಕ್ಕೋಡಿ ತಹಶಿಲ್ದಾರ ಕಚೇರಿಯಲ್ಲಿ ಖಾಲಿ ಇರುವ ಪ್ರ.ದ.ಸ. ಹುದ್ದೆಗೆ ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಆದೇಶ ಹೊರಡಿಸಿರುತ್ತಾರೆ.
ಕಚೇರಿಯ ಸಿಬ್ಬಂದಿಯೊಬ್ಬರು ಅಕಾಲಿಕವಾಗಿ ನಿಧನ ಹೊಂದಿರುವುದರಿಂದ ಅವರ ಕುಟುಂಬವು ಸಂಕಷ್ಟಕ್ಕೆ ಸಿಲುಕಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಕೂಡಲೇ ನೇರ ನೇಮಕಾತಿ ಆದೇಶ ನೀಡುವ ಮೂಲಕ ಸಿಬ್ಬಂದಿಯ ಕುಟುಂಬಕ್ಕೆ ನೆರವಾಗಿರುತ್ತಾರೆ.

ಜಿಲ್ಲೆ

ರಾಜ್ಯ

error: Content is protected !!