Saturday, July 27, 2024

ಸಸ್ಪೆಂಡ್‌ ಆದ ಇಂಜಿನಿಯರ ಮರು ನೇಮಕಕ್ಕೆ 2.5 ಕೋಟಿ ಲಂಚ ಪಡೆದ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ: ರವಿ ಚಂಗಪ್ಪ ಆರೋಪ.

ಮಡಿಕೇರಿ: ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ 2.5 ಕೋಟಿ ರೂಪಾಯಿ ಲಂಚ ಪಡೆದು ಅಮಾನತುಗೊಂಡಿದ್ದ ಇಂಜಿನಿಯರ್ ಅವರನ್ನು ಮರು ನೇಮಕ ಮಾಡಿಸಿದ್ದಾರೆ ಎಂದು ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚಂಗಪ್ಪ ಆರೋಪಿಸಿದ್ದಾರೆ.

ಭ್ರಷ್ಟಾಚಾರದ ಆರೋಪದಿಂದ ಸಸ್ಪೆಂಡ್ ಆಗಿದ್ದ ಇಂಜಿನಿಯರ್ ಶ್ರೀಕಂಠಯ್ಯ ಮತ್ತೆ ಜಿಲ್ಲೆಗೆ ವಾಪಸ್ ಆಗಿದ್ದಾರೆ. ಶ್ರೀಕಂಠಯ್ಯ ಮರು ನೇಮಕಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಬೋಪಯ್ಯ ಪತ್ರ ಬರೆದಿದ್ದರು ಎಂದು ಆರೋಪಿಸಿದ್ದಾರೆ.

ಕೊಡಗು ಪಂಚಾಯತ್ ರಾಜ್ ಇಲಾಖೆ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿದ್ದ ಶ್ರೀಕಂಠಯ್ಯ, ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದರು. ಜೈಲಿಗೆ ಹೋಗಿ ಬಂದ ಇಂಜಿನಿಯರ್ ಮರು ನೇಮಕಕ್ಕೆ ಬಿಜೆಪಿ ಶಾಸಕರು ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಪ್ರತಿ ಕಾಮಗಾರಿಗೆ ಶೇ.40ರಷ್ಟು ಕಮಿಷನ್ ಪಡೆದುಕೊಳ್ಳಲಾಗುತ್ತಿದೆ. ಕಮಿಷನ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಶಾಸಕ ಬೋಪಯ್ಯ ಕಮಿಷನ್ ಇಲ್ಲದೇ ಯಾವ ಕೆಲಸವನ್ನೂ ಮಾಡಿಕೊಡುವುದಿಲ್ಲ ಎಂದು ರವಿ ಚಂಗಪ್ಪ ಆರೋಪಿಸಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!