Saturday, July 20, 2024

ಪ್ರತಿಭಾ ಕಾರಂಜಿಯಲ್ಲಿ ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇಂಗ್ಲಿಷ ಭಾಷಣದಲ್ಲಿ ಕಾವೇರಿ ಬೋಬಡೆ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕನ್ನಡ ಭಾಷಣದಲ್ಲಿ ಐಶ್ವರ್ಯ ಕುಲಕರ್ಣಿ ತೃತೀಯ, ರಸಪ್ರಶ್ನೆಯಲ್ಲಿ ಚೈತ್ರಾ ಸೊಗಲದ ಹಾಗೂ ರಾಜೇಶ್ವರಿ ಸೊಗಲದ ದ್ವಿತೀಯ, ಚಿತ್ರಕಲೆಯಲ್ಲಿ ಚಿನ್ಮಯಿ ಹಳ್ಳಿಕೇರಿಮಠ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರಕಲಾ ಶಿಕ್ಷಕರಾದ ಶ್ರೀಪಾಲ ಚೌಗಲಾ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ರೇಖಾ ಸೊರಟೂರ, ಹೇಮಲತಾ ಪುರಾಣಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದರು.

ಜಿಲ್ಲೆ

ರಾಜ್ಯ

error: Content is protected !!