Saturday, July 27, 2024

ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ಅಜ್ಜಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿ ಹಕ್ಕುಬಿಟ್ಟ ಪತ್ರಕ್ಕೆ ಸಹಿ

ಬೆಳಗಾವಿ: ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಅಮಾನವಿ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ ವಿದ್ಯಾ ಅಗಸಿಮನಿ(54) ಹಾಗೂ ರವೀಂದ್ರ ಗುರಪ್ಪ ಅಗಸಿಮನಿ(51) ಎಂಬುವರಿಗೆ ಹಕ್ಕುಬಿಟ್ಟು ಕೊಡಲು ಅರ್ಜಿ ಸಲ್ಲಿಸಿದ್ದರು.

ಆಸ್ಪತ್ರೆ ಐಸಿಯುನಿಂದಲೇ ಸಹಿ ಮಾಡಲು 80ರ ವೃದ್ಧೆಯನ್ನು ಕಚೇರಿಗೆ ಕರೆಯಿಸಿಕೊಂಡ ಅಧಿಕಾರಿಗಳು

ಆಸ್ತಿ ಹಂಚಿಕೆ ಸಂಬಂಧ ಹಕ್ಕುಪತ್ರಕ್ಕೆ ಹೆಬ್ಬೆಟ್ಟು ಒತ್ತಿ ಸಹಿ ಹಾಕುಲು ಮಹಾದೇವಿ ಅಗಸಿಮನಿ ಬೆಳಗಾವಿಯ ಉಪನೋಂದಣಿ ಕಚೇರಿಗೆ ಆಗಮಿಸಬೇಕಿತ್ತು. ಅಜ್ಜಿ ಅನಾರೋಗ್ಯದಿಂದ ಐಸಿಯುನಲ್ಲಿದ್ದ ಕಾರಣಕ್ಕೆ ಉಪನೋಂದಣಿ ಅಧಿಕಾರಿಗೆ ಆಸ್ಪತ್ರೆಗೆ ಬರಲು ಕುಟುಂಬಸ್ಥರು ಮನವಿ ಮಾಡಿದ್ದರು. ಆದ್ರೆ ಪ್ರೈವೇಟ್​ ಅರ್ಜಿ ಸಲ್ಲಿಸದ ಹಿನ್ನೆಲೆ ಸಿಬ್ಬಂದಿಯು ಅಜ್ಜಿ ಇದ್ದ ಸ್ಥಳಕ್ಕೆ ಬಂದಿಲ್ಲವಂತೆ.

ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸಿಲ್ಲ- ಸಹಾಯಕ ಉಪನೋಂದಣಾಧಿಕಾರಿ ಸಚಿನ್: ಆಸ್ಪತ್ರೆ ಬೆಡ್ ಮೇಲೆ ವೃದ್ಧೆಯನ್ನು ಕಚೇರಿಗೆ ಕರೆಯಿಸಿ ಹಕ್ಕು ಪತ್ರಕ್ಕೆ ಸಹಿ ಹಾಕಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಹಾಯಕ ಉಪನೋಂದಣಾಧಿಕಾರಿ ಸಚಿನ್ ಮಂಡೇದ, ನಾನು ನಿನ್ನೆ ಕಚೇರಿಯಲ್ಲಿ ಇದ್ದಿರಲಿಲ್ಲ. ಸಬ್ ರಿಜಿಸ್ಟ್ರಾರ್ ಇದ್ದರು. ಅವರಿಂದು ರಜೆ ಮೇಲೆ ತೆರಳಿದ್ದಾರೆ. ಆಪರೇಟರ್ ಹತ್ತಿರ ಕೇಳಿದಾಗ ನನಗೆ ಈ ಬಗ್ಗೆ ಗೊತ್ತಾಗಿದ್ದು, ಹಕ್ಕುಬಿಟ್ಟ ಪತ್ರ ಮಾಡಿಸಲು ಅಜ್ಜಿಯನ್ನು ಸ್ಟ್ರೆಚರ್ ಮೇಲೆ ಕರೆದುಕೊಂಡು ಬಂದಿದ್ದರು ಎಂದು ತಿಳಿಸಿದ್ದಾರೆ.

ಪ್ರೈವೆಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಅರ್ಜಿ ಕೊಟ್ರೆ ನಾವು ಪ್ರೈವೇಟ್ ಅಟೆಂಡೆನ್ಸ್ ಮಾಡುತ್ತೇವೆ. ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸುವ ವೇಳೆ 1000 ರೂ‌. ಶುಲ್ಕ ಪಾವತಿಸಬೇಕಿರುತ್ತದೆ. ಆಗ ನಾವು ಓರ್ವ ಸಿಬ್ಬಂದಿ ನೇಮಿಸಿ ಕಳುಹಿಸಿ ಕೊಡುತ್ತೇವೆ. ಹಣ ನೀಡದ ಹಿನ್ನೆಲೆ ಕಚೇರಿಗೆ ಕರೆದುಕೊಂಡು ಬರುವಂತಾಯ್ತು ಎಂಬ ಆರೋಪ ವಿಚಾರಕ್ಕೆ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಹಾಯಕ ಉಪನೋಂದಣಾಧಿಕಾರಿ ಸಚಿನ್ ಮಂಡೇದ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!